ಸಾರಾಂಶ
ಸೊರಬ: ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯಿಂದ ನ.೨೫ರಂದು ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಹಾಗೂ ನಾಲ್ಕನೇ ವಾರ್ಷಿಕೋತ್ಸವ ಸಮಾರಂಭ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಪ್ರವೀಣ್ ಹಿರೇಹಿಡಗೋಡು ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರಲ್ಲಿ ಕನ್ನಡ ರಾಜ್ಯೋತ್ಸವ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾರ್ಯಕ್ರಮಕ್ಕೂ ಮೊದಲು ಸಿದ್ದಾಪುರ ತಾಲೂಕಿನ ಭುವನಗಿರಿಯಿಂದ ಕನ್ನಡಾಂಬೆಯ ಜ್ಯೋತಿ ಹಾಗೂ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಭಾವಚಿತ್ರದೊಂದಿಗೆ ವಿವಿಧ ಕಲಾ ತಂಡಗಳ ಜೊತೆಗೆ ಪೂರ್ಣ ಕುಂಭ ಕಳಸದಿಂದ ಸಿ.ಪಿ.ವೀರೇಶ್ ಗೌಡ್ರು ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸಾಗರದ ರೆಡ್ ಕ್ರಾಸ್ ರಕ್ತ ಕೇಂದ್ರದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದರು.ಬೆಳಗ್ಗೆ ನಡೆಯುವ ವೇದಿಕೆ ಕಾರ್ಯಕ್ರಮವನ್ನು ರೋಟರಿ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಈ.ಜ್ಞಾನೇಶ್ ಉದ್ಘಾಟಿಸಲಿದ್ದು, ಲಕ್ಕವಳ್ಳಿ ಕಾನುಕೇರಿ ಮಠದ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಘನ ಉಪಸ್ಥಿತಿಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಎಚ್.ಹಾಲಪ್ಪ, ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯ ರಾಜ್ಯಾಧ್ಯಕ್ಷ ಆರ್.ವಿಜಯಕುಮಾರ್ ಸಿದ್ದಾಪುರ ಭಾಗವಹಿಸುವರು. ಕನ್ನಡ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ ಅಧ್ಯಕ್ಷತೆ ವಹಿಸುವರು. ವಿಶೇಷ ಅಹ್ವಾನಿತರಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ವೇತಾ ಬಂಡಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಸಂಜೆಯ ಕಾರ್ಯಕ್ರಮವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ದಿವ್ಯ ಸಾನ್ನಿಧ್ಯವನ್ನು ಜಡೆ ಹಾಗೂ ಸೊರಬ ಮುರುಘಾ ಮಠದ ಡಾ.ಮಹಂತ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ್ ಭಾಗವಹಿಸಲಿದ್ದು, ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಪ್ರವೀಣ್ ಹಿರೇಹಿಡಗೂಡು ಅಧ್ಯಕ್ಷತೆ ವಹಿಸಲಿದ್ದಾರೆ. ಎಂವಿಕೆ ಅಭಿಮಾನಿ ಬಳಗದ ರಾಜ್ಯ ಅಧ್ಯಕ್ಷ ವಸಂತ ಮೇಳವರಿಗೆ ಹಾಗೂ ಎಂವಿಕೆ ಅಭಿಮಾನಿ ಬಳಗದ ರಾಜ್ಯ ಗೌರವಾಧ್ಯಕ್ಷ ಯುವರಾಜ್ ಕೊಡಕಣಿ ಭಾಗವಹಿಸುವರು. ಡ್ರಾಮಾ ಜ್ಯೂನಿಯರ್ ಖ್ಯಾತಿಯ ಮಹಾಲಕ್ಷ್ಮಿ ಇವರಿಂದ ನೃತ್ಯ ಕಾರ್ಯಕ್ರಮ ಹಾಗೂ ಬಿ.ಲೋಕನಾಥ್ ಭದ್ರಾವತಿ ಬ್ರದರ್ಸ್ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ, ಮಹಿಳಾ ಅಧ್ಯಕ್ಷೆ ಎ.ವಿ.ಪವಿತ್ರ, ತಾಲೂಕು ಘಟಕದ ಗೌರವಾಧ್ಯಕ್ಷ ಲಕ್ಷ್ಮಣಪ್ಪ, ಉಪಾಧ್ಯಕ್ಷ ಜ್ಯೋತಿ, ಕಾರ್ಯದರ್ಶಿ ಕೆ.ಜಿ.ಅನಕೃತ, ನಗರ ಘಟಕದ ಅಧ್ಯಕ್ಷ ಮಹೇಶ್ ಖಾರ್ವಿ, ರಮೇಶ್ ತಳೇಬೈಲು, ಭರತ್ ಹಳೇಸೊರಬ, ಹರೀಶ್ ಮೊದಲಾದವರಿದ್ದರು.
;Resize=(128,128))
;Resize=(128,128))
;Resize=(128,128))