ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಮಾಜದ ವತಿಯಿಂದ 10ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 18 ಮತ್ತು 19 ರಂದು ನಡೆಯಲಿದೆ.

ಕನ್ನಡಪ್ರಭವಾರ್ತೆ ಮಡಿಕೇರಿ

ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಮಾಜದ ವತಿಯಿಂದ 10ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 18 ಮತ್ತು 19 ರಂದು ನಡೆಯಲಿದೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಗೌರವಾಧ್ಯಕ್ಷ ಪಿ.ಎಂ.ರವಿ, ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದರು. ಕೊಡಗನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿಯ ಮೊಗೇರ ಬಾಂಧವರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾಜ ಬಾಂಧವರನ್ನು ಒಗ್ಗೂಡಿಸುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೊಗೇರ ಸಮಾಜದ ಪ್ರತಿಭಾವಂತರನ್ನು ಗುರುತಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಿಲಾಗಿದೆ ಎಂದರು.

60 ತಂಡಗಳ ನೋಂದಣಿ: ರಾಜ್ಯ ಮಟ್ಟದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ 60 ತಂಡಗಳು ನೋಂದಣಿ ಮಾಡಿಕೊಂಡಿವೆ. 4 ಓವರ್‌ ಗಳಿಗೆ ಸೀಮಿತವಾಗಿ ಪಂದ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ. 18ರಂದು ಬೆಳಗ್ಗೆ ಮೊಗೇರ ಸಮಾಜದ ಲಾಂಛನವನ್ನು ಒಳಗೊಂಡ ಧ್ವಜಾರೋಹಣದ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುತ್ತದೆ. ಉದ್ಘಾಟನಾ ಸಮಾರಂಭಕ್ಕೆ ಜಿಲ್ಲೆಯ ಶಾಸಕರು, ಸಂಸದರು ಹಾಗೂ ರಾಜ್ಯ ಮಟ್ಟದ ನಾಯಕರನ್ನು ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು. ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ತಂಡಗಳ ಹೆಸರನ್ನು 10ರ ಒಳಗಾಗಿನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ನೋಂದಣಿಗೆ: ಪಂದ್ಯಾಟನೋಂದಣಿಗೆ ಮೊಗೇರ ಸೇವಾ ಸಮಾಜದ ಮಡಿಕೇರಿ ತಾಲೂಕು ಅಧ್ಯಕ್ಷ ರಘು ಹೆಬ್ಬೆಟ್ಟಗೇರಿ ಮೊ.8277277730, ಕ್ರೀಡಾಧ್ಯಕ್ಷ ಚಂದ್ರ ಮೊ.9845732488, ಪ್ರಕಾಶ್ ಪಿ.ಪಿ. ಮೊ.7975103368 ನ್ನು ಸಂಪರ್ಕಿಸಬಹುದು. 18ರಂದು ಬೆಳಗ್ಗೆ 8 ಗಂಟೆಗೆ ನೋಂದಾಯಿತ ತಂಡಗಳು ಮೈದಾನದಲ್ಲಿ ಹಾಜರಿರಬೇಕು.

ಕಬಡ್ಡಿ ಪಂದ್ಯಾವಳಿ: 18 ರಂದು ಸಂಜೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು,

ಈಗಾಗಲೇ 10 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ.

ವಿವಿಧ ಸ್ಪರ್ಧೆಗಳು: ಕ್ರಿಕೆಟ್‌ನೊಂದಿಗೆ 19ರಂದು ವಾಲಿಬಾಲ್, ಮಹಿಳೆಯರ ಥ್ರೋಬಾಲ್, ಪುರುಷರ ಹಗ್ಗಜಗ್ಗಾಟ, ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ. ಇದರೊಂದಿಗೆ ಮೊಗೇರ ಸಮಾಜದ ಪುರುಷರಿಗೆ 400 ಮೀ. ಓಟದ ಸ್ಪರ್ಧೆ, ಮಹಿಳೆಯರಿಗೆ 200 ಮೀ. ಓಟ, 60 ವರ್ಷ ಮೇಲ್ಪಟ್ಟ ವಯಸ್ಕರಿಗೆ ವೇಗದ ನಡಿಗೆ, 3 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ 100 ಮೀ. ಓಟ, 7 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 300 ಮೀ. ಓಟ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 400 ಮೀ. ಓಟ, 3 ವರ್ಷ ಒಳಪಟ್ಟ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ಮಹಿಳೆಯರಿಗೆ ಸಂಗೀತ ಕುರ್ಚಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ .9845732488, 7975103368 ನ್ನು ಸಂಪರ್ಕಿಸಬಹುದು.

ಆಕರ್ಷಕ ಬಹುಮಾನ: ಕ್ರಿಕೆಟ್ ಪಂದ್ಯಾವಳಿ ವಿಜೇತ ತಂಡಕ್ಕೆ 30 ಸಾವಿರ ರೂ. ನಗದು ಮತ್ತು ಟ್ರೋಫಿ, ದ್ವಿತೀಯ 20 ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ ಇತರ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನಿಡಲಾಗುತ್ತದೆಂದು ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: 19ರಂದು ಸಂಜೆ ಸಮಾರೋಪ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ವೇದಿಕೆ ಕಾರ್ಯಕ್ರಮಗಳ ಬಳಿಕ ಸಮಾಜ ಬಾಂಧವರಿಂದ ಭರತನಾಟ್ಯ, ನಾಟಕ, ಏಕಪಾತ್ರಾಭಿನಯ, ಜಾನಪದ ಗೀತೆ ಗಾಯನ, ಮಿಮಿಕ್ರಿ, ಗ್ರೂಪ್ ಡ್ಯಾನ್ಸ್, ಛದ್ಮವೇಷ, ಜಾನಪದ ನೃತ್ಯ, ಸಿನಿಮಾ ಹಾಡುಗಳಿಗೆ ನೃತ್ಯ ಸೇರಿದಂತೆ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ರವಿ ಪಿ.ಎಂ ಮೊ.9886503367, ಪ್ರಕಾಶ್‌ ತಾಳತ್ತಮನೆ ಮೊ. 7975103368ನ್ನು ಸಂಪರ್ಕಿಸಬಹುದು ಎಂದು ಪಿ.ಎಂ.ರವಿ ಮಾಹಿತಿ ನೀಡಿದರು.

ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಜನಾರ್ಧನ್ ಪಿ.ಬಿ., ಮಡಿಕೇರಿ ತಾಲ್ಲೂಕು ಅಧ್ಯಕ್ಷ ರಘು ಪಿ.ಸಿ., ಜಿಲ್ಲಾ ಕ್ರೀಡಾಧ್ಯಕ್ಷ ಚಂದ್ರ ಎಂ.ಜಿ., ಜಿಲ್ಲಾ ಸಮಿತಿ ಸದಸ್ಯ ಸುರೇಶ್ ಪಿ.ಬಿ ಹಾಗೂ ಕ್ರೀಡಾ ಕಾರ್ಯದರ್ಶಿ ರಮೇಶ್ ಪಿ.ಸಿ. ಸುದ್ದಿಗೋಷ್ಠಿಯಲ್ಲಿದ್ದರು.