ಕಲಾದಗಿ: ಕಬ್ಬು ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕೆ ಅಗತ್ಯ ಕ್ರಮಗಳ ಕುರಿತು ಚರ್ಚಿಸಲು ಭಾರತೀಯ ಕಿಸಾನ ಸಂಘದ ರಾಷ್ಟ್ರೀಯ ಅಧ್ಯಕ್ಷ ಸಾಯಿರೆಡ್ಡಿ ಅವರು ಸೆ.21ರಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಭಾರತೀಯ ಕಿಸಾನ ಸಂಘದ ಬಾಗಲಕೋಟೆ ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆರೊಂದಿಗೆ ಮಾತನಾಡಿದ ಅವರು, ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ, ಹುಬ್ಬಳ್ಳಿ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ಸಹಯೋಗದಲ್ಲಿ ಸೆ.21ರ ಸೋಮವಾರ ಬೆಳಗ್ಗೆ 11 ಗಂಟೆಗೆ ಗದ್ದನಕೇರಿ ಕ್ರಾಸ್‍ನ ಲಡ್ಡು ಮುತ್ತ್ಯಾ ದೇವಸ್ಥಾನದಲ್ಲಿ ರಾಜ್ಯ ಮಟ್ಟದ ಕಬ್ಬು ಬೆಳೆಗಾರರ ವಿಚಾರ ಸಂಕಿರಣ ನಡೆಯಲಿದೆ. ವಿಚಾರ ಸಂಕಿರಣದಲ್ಲಿ ಸಾಯಿರೆಡ್ಡಿ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಕಬ್ಬಿನ ಬೆಲೆ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಭಾರತೀಯ ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ ಕೋಕರೆ, ಉತ್ತರ ಪ್ರಾಂತ ಅಧ್ಯಕ್ಷ ವಿವೇಕ ಮೋರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಪುಟ್ಟಸ್ವಾಮಿ, ಉತ್ತರ ಪ್ರಾಂತ ಪ್ರಧಾನ ಕಾರ್ಯದರ್ಶಿ ಜಗದೀಶ ಸಂಕನಗೌಡರ, ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಇರುವರು. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆಯಲಿರುವ ಈ ವಿಚಾರ ಸಂಕಿರಣಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಬೆಳೆಗಾರರು ಆಗಮಿಸಬೇಕೆಂದು ಕೋರಿದ್ದಾರೆ. ಈ ವೇಳೆ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರ ಯಡಹಳ್ಳಿ ಬಾಗಲಕೋಟೆ ತಾಲೂಕು ಅಧ್ಯಕ್ಷ ಚಂದ್ರಶೇಖರ ಹಡಪದ ಇನ್ನಿತರರು ಇದ್ದರು.