೮ರಂದು ವಿವೇಕಾನಂದ ಕಾಲೇಜ್‌ನಲ್ಲಿ ‘ಎನ್ವೋ- ಟೆಕ್’ ರಾಜ್ಯಮಟ್ಟದ ವಿಚಾರ ಸಂಕಿರಣ

| Published : Nov 06 2024, 11:49 PM IST

೮ರಂದು ವಿವೇಕಾನಂದ ಕಾಲೇಜ್‌ನಲ್ಲಿ ‘ಎನ್ವೋ- ಟೆಕ್’ ರಾಜ್ಯಮಟ್ಟದ ವಿಚಾರ ಸಂಕಿರಣ
Share this Article
  • FB
  • TW
  • Linkdin
  • Email

ಸಾರಾಂಶ

ಮಣಿಪಾಲ ಎಂಐಟಿಯ ಜಿಯೋಲಜಿ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಬಾಲಕೃಷ್ಣ ಕಾರ್ಯಕ್ರಮದ ಉದ್ಘಾಟನೆ ಮತ್ತು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪರಿಸರ ತಜ್ಞ ಮತ್ತು ಅಂಕಣಕಾರ ಶಿವಾನಂದ ಕಳವೆ ಮತ್ತು ಡಾ.ಕೆ.ಬಾಲಕೃಷ್ಣ ಅವರು ವಿವಿಧ ವಿಷಯಗಳ ಕುರಿತಾಗಿ ಗೋಷ್ಠಿಗಳನ್ನು ನಡೆಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನಾಳೆಯ ಒಳಿತಿಗಾಗಿ ಸುಸ್ಥಿರ ಪರಿಹಾರ ಎಂಬ ಧೈಯದೊಂದಿಗೆ ನ.೮ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ‘ಎನ್ವೋ -ಟೆಕ್’ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ತಿಳಿಸಿದ್ದಾರೆ. ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪರಿಸರ ಮತ್ತು ಟೆಕ್ನಾಲಜಿಯನ್ನು ಮುಂದಿಟ್ಟು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಮಣಿಪಾಲ ಎಂಐಟಿಯ ಜಿಯೋಲಜಿ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಬಾಲಕೃಷ್ಣ ಕಾರ್ಯಕ್ರಮದ ಉದ್ಘಾಟನೆ ಮತ್ತು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪರಿಸರ ತಜ್ಞ ಮತ್ತು ಅಂಕಣಕಾರ ಶಿವಾನಂದ ಕಳವೆ ಮತ್ತು ಡಾ.ಕೆ.ಬಾಲಕೃಷ್ಣ ಅವರು ವಿವಿಧ ವಿಷಯಗಳ ಕುರಿತಾಗಿ ಗೋಷ್ಠಿಗಳನ್ನು ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಎನ್ವೋ-ಟೆಕ್ ಎಂಬ ವಿಚಾರಕ್ಕೆ ಸಂಬಂಧಿಸಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಬಂಧ ಮಂಡನೆ ಮತ್ತು ಭಿತ್ತಿಪತ್ರ ವಿನ್ಯಾಸ ಸ್ಪರ್ಧೆಯು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಚಾಲಕ ಮುರಳಿಕೃಷ್ಣ ಕೆ.ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಮತ್ತು ವಿಚಾರ ಸಂಕಿರಣದ ಸಂಯೋಜಕಿ ಡಾ. ವಿಜಯ ಸರಸ್ವತಿ, ಸ್ನಾತಕೋತ್ತರ ವಿಜ್ಞಾನ ವಿಭಾಗದ ಸಂಯೋಜಕ ಶಿವಪ್ರಸಾದ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ನಿಡ್ಪಳಿ ಇದ್ದರು.