ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ.ಪ್ರಥಮ ದರ್ಜೆ ಕಾಲೇಜು ವತಿಯಿಂದ ಡಿ.12, 13ರಂದು ಎರಡು ದಿನಗಳ ಕಾಲ ಬಹುರೂಪಿ ಗಾಂಧಿ, ಗಾಂಧೀಜಿ ಅವರ ಬಹುಮುಖಿ ವ್ಯಕ್ತಿತ್ವ ಮತ್ತು ಚಿಂತನೆಗಳ ಪ್ರಸ್ತುತತೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಆರ್.ಕೆ.ಪ್ರಥಮ ದರ್ಜೆ ಕಾಲೇಜು ವತಿಯಿಂದ ಡಿ.12, 13ರಂದು ಎರಡು ದಿನಗಳ ಕಾಲ ಬಹುರೂಪಿ ಗಾಂಧಿ, ಗಾಂಧೀಜಿ ಅವರ ಬಹುಮುಖಿ ವ್ಯಕ್ತಿತ್ವ ಮತ್ತು ಚಿಂತನೆಗಳ ಪ್ರಸ್ತುತತೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಆರ್.ಕೆ.ಸಮೂಹ ಸಂಸ್ಥೆಗಳ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ರಾಮಕೃಷ್ಣ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಹಾಗೂ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಡಿ.12ರಂದು ಬೆಳಗ್ಗೆ 10.30ಕ್ಕೆ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಡೋಜ ಡಾ.ವೊಡೇ ಪಿ.ಕೃಷ್ಣ ಉದ್ಘಾಟಿಸುವರು. ತಾವು ಅಧ್ಯಕ್ಷತೆ ವಹಿಸುವುದಾಗಿ ತಿಳಿಸಿದರು.

ಮೈಸೂರಿನ ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ಕಾರ್ಯದರ್ಶಿ ಸರೋಜಮ್ಮ ತುಳಸಿದಾಸ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಎಂ.ಸಿ,ನರೇಂದ್ರ ಹಾಗೂ ಆರ್.ಕೆ.ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಪ್ರಾಚಾರ್ಯ ಡಾ.ಎಂ.ಸಿ.ಸತೀಶ್ ಬಾಬು ಪ್ರಾಸ್ತವಿಕ ಭಾಷಣ ಮಾಡಲಿದ್ದಾರೆ ಎಂದರು.

ಮಧ್ಯಾಹ್ನ 2 ಗಂಟೆಗೆ ಗೋಷ್ಠಿ-೧ರಲ್ಲಿ ಹಾಸನದ ಆಲೂರು ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಕೆ.ರೋಹಿತ್ ಗಾಂಧೀಜಿ: ಸತ್ಯ ಮತ್ತು ಅಹಿಂಸೆ ಜೊತೆಗಿನ ಪ್ರಯೋಗಗಳು’ ಕುರಿತು ಮತ್ತು ಯಶೋಧರಮ್ಮ ದಾಸಪ್ಪ ಒಂದು ಸಂಸ್ಮರಣೆ ಕುರಿತು ವಿಶ್ರಾಂತ ಪ್ರಾಂಶುಪಾಲರಾದ ಡಾ.ಲೀಲಾ ಅಪ್ಪಾಜಿ ಉಪನ್ಯಾಸ ನೀಡಲಿದ್ದಾರೆ. ಮಂಡ್ಯದ ಶಂಕರಗೌಡ ಶಿಕ್ಷಣ ಮಹಾ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಡಿ.13ರಂದು ಬೆಳಗ್ಗೆ 10.30ಕ್ಕೆ ಗೋಷ್ಠಿ-1ರಲ್ಲಿ ಮೈಸೂರು ಸಿದ್ಧಾರ್ಥ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕಿ ಡಾ. ತ್ರಿವೇಣಿ ಗಾಂಧೀಜಿಯವರ ಶಿಕ್ಷಣ ವಿಚಾರಧಾರೆಗಳು ಹಾಗೂ ಪ್ರಖ್ಯಾತ ಶಸ್ತ್ರಚಿಕಿತ್ಸಾ ತಜ್ಞ ಡಾ.ಅಮರ್ ಕುಮಾರ್ - ಗಾಂಧೀಜಿ: ಬಹುರೂಪಿ ನೆಲೆಗಳು’ ಕುರಿತು ಉಪನ್ಯಾಸ ನೀಡಲಿದ್ದಾರೆ. ಮೈಸೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ, ಲೇಖಕ ಡಾ.ಪಿ.ಬೆಟ್ಟೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕೆ ಆರ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಲೇಖಕ ಡಾ.ಪ್ರಭು ಬಿಸ್ಲೆಹಳ್ಳಿ ನಾ ಕಂಡಂತೆ ಬಾಪು ವಿಷಯದ ಬಗ್ಗೆ ಸಂವಾದ ನಡೆಸಿಕೊಡಲಿದ್ದಾರೆ ಎಂದರು.

ಮಧ್ಯಾಹ್ನ 2.30ಕ್ಕೆ ನಡೆದ ಸಮಾರೋಪ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಕಿಕ್ಕೇರಿ ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಜಾವಾಣಿ ದಿನಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಸಮಾರೋಪ ಭಾಷಣ ಮಾಡಲಿದ್ದಾರೆ. ಜಿಪಂ ಸಿಇಒ ಕೆ.ಆರ್ ನಂದಿನಿ, ಸಂಸ್ಥೆ ಕೀರ್ತನ ಆರ್.ನಿಖಿಲ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಂಡ್ಯ ವಿವಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.ಎಂ.ಬಿ.ಪ್ರಮೀಳಾ ಮತ್ತು ವಿನ್ಯಾಸಕ ಮತ್ತು ವಿಸ್ಮಯ ಬುಕ್ ಹೌಸ್ ನ ಪ್ರಕಾಶ್ ಚಿಕ್ಕಪಾಳ್ಯ ಉಪಸ್ಥಿತರಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಆಡಳಿತಾಧಿಕಾರಿ ಮರಿಸ್ವಾಮಿಗೌಡ, ಸಂಚಾಲಕ ಡಾ.ಎಂ.ಸಿ.ಸತೀಶ್ ಬಾಬು, ಸಹಾಯಕ ಪ್ರಾಧ್ಯಾಪಕ ರಾಧಾ ಎ.ಜಿ.ಚಂದ್ರ, ಮುತ್ತಲಿಂಗಯ್ಯ ಇದ್ದರು.