ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ

| Published : Oct 10 2023, 01:01 AM IST

ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಮಟ್ಟದ ಸೇವಾದಳ ಸಮಾವೇಶ: ರಾಮಚಂದ್ರಪ್ಪ
- ಚಿಕ್ಕಮಗಳೂರಿನ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ರಾಜ್ಯ ಸಮಾವೇಶದ ಪೂರ್ವಭಾವಿ ಸಭೆ ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ರಾಜ್ಯ ಮಟ್ಟದ ಸೇವಾದಳ ಸಮಾವೇಶವನ್ನು ಈ ತಿಂಗಳ ಅಕ್ಟೋಬರ್ ನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸೇವಾದಳದಿಂದ ನಡೆದ ಬ್ಲಾಕ್ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಆಯಾ ಜಿಲ್ಲೆಗಳಲ್ಲಿ ಸೇವಾದಳ ಸಮ್ಮೇಳನದ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ದೇಶನದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಸೇವಾದಳ ಕಾರ್ಯಕರ್ತರು ಶ್ರಮಿಸುವಂತೆ ಮನವಿ ಮಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ 200 ಜನ ಸಮವಸ್ತ್ರವುಳ್ಳ ಸೇವಾದಳ ಕಾರ್ಯಕರ್ತರನ್ನು ಸಮ್ಮೇಳನಕ್ಕೆ ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷರು ಸಜ್ಜುಗೊಳಿಸಬೇಕು. ಎನ್.ಎಸ್.ಯು.ಐ, ಮಹಿಳಾ ಕಾಂಗ್ರೆಸ್ ಮತ್ತು ಸೇವಾದಳ ಕಾರ್ಯಕರ್ತರು ಸಮ್ಮೇಳನದ ಯಶಸ್ಸಿಗೆ ಮುಂದಾಗುವಂತೆ ಕರೆ ನೀಡಿದರು. ಕೆಲವೇ ತಿಂಗಳಿನಲ್ಲಿ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆ ಗಳು ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪರವಾದ ಯೋಜನೆಗಳು ಜಾರಿಯಾಗಿರುವುದನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ಪಕ್ಷದ ಕಾರ್ಯಕರ್ತರು ತಿಳಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರನ್ನು ಈ ಬಾರಿ ಪ್ರಧಾನಿ ಮಾಡ ಬೇಕೆಂದು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಅವರ ಗೆಲುವಿಗಾಗಿ ತಳಮಟ್ಟದಿಂದ ಪಕ್ಷ ವನ್ನು ಸದೃಢಗೊಳಿಸುವ ಜೊತೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಸೇವಾ ದಳ ಜಿಲ್ಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ಜಿಲ್ಲಾ ಸಮಿತಿ ರಚಿಸುವ ಜೊತೆಗೆ ಮಹಿಳಾ ಘಟಕವನ್ನು ರಚಿಸಲು ಸೇವಾದಳ ರಾಜ್ಯಾಧ್ಯಕ್ಷರು ಮುಂದಾಗುವಂತೆ ತಿಳಿಸಿದರು. ಸಂಘಟನೆಗೆ ಪೂರಕವಾಗಿ ಜಿಲ್ಲೆಯ ವಿವಿಧ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ಸಿದ್ದಾಂತ ಮತ್ತು ವಿಚಾರಧಾರೆಯನ್ನು ಮನೆ ಮನೆಗೆ ಭೇಟಿ ನೀಡಿ, ಜೊತೆಗೆ ಜನರಿಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಸೇವಾದಳಕ್ಕೆ ಇರುವ ಗೌರವ ಕಾಂಗ್ರೆಸ್ ಪಕ್ಷದ ಯಾವುದೇ ಘಟಕಕ್ಕೆ ಇಲ್ಲ. ಸೇವಾದಳದಿಂದ ಶಿಸ್ತು, ಗೌರವ ಬರುತ್ತದೆ. ಸೇವಾದಳದಲ್ಲಿ ಕನಿಷ್ಠ ಒಂದು ವರ್ಷವಾದರೂ ಸೇವೆ ಮಾಡುವ ಸೇವಾ ಮನೋಭಾವವನ್ನು ಕಾರ್ಯಕರ್ತರು ಬೆಳೆಸಿ ಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ಸೇವಾದಳ ಜಿಲ್ಲಾಧ್ಯಕ್ಷ ಆರ್.ಎಂ . ಬಸವರಾಜು, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೃದೀಪ್, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಕೆ.ಎಂ.ಸಿದ್ದಪ್ಪ, ಧರ್ಮರಾಜ್, ಜಿ.ಬಿ.ಅರುಣ್, ಬಿ.ಎಂ. ಲೋಹಿತ್, ಶೇಖರ್ ರಾಜ್, ಸೇವಾದಳ ಪ್ರಧಾನ ಕಾರ್ಯದರ್ಶಿ ಸುರೇಶ್ ಉಪಸ್ಥಿತರಿದ್ದರು. 9 ಕೆಸಿಕೆಎಂ 2 ಚಿಕ್ಕಮಗಳೂರು ಕಾಂಗ್ರೆಸ್‌ ಕಾರ್ಯಾಲಯದಲ್ಲಿ ನಡೆದ ಸೇವಾದಳ ಘಟಕದ ಸಭೆಯಲ್ಲಿ ಕೆಪಿಸಿಸಿ ಸೇವಾದಳ ಘಟಕದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಅವರನ್ನು ಸನ್ಮಾನಿಸಲಾಯಿತು. ಡಾ. ಅಂಶುಮಂತ್‌, ಎಂ.ಎಲ್‌. ಮೂರ್ತಿ, ಮಂಜೇಗೌಡ ಇದ್ದರು.