ಮಾದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

| Published : Jun 08 2025, 03:08 AM IST

ಮಾದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು: ತಾಲೂಕಿನ ಧಾರ್ಮಿಕ ಯಾತ್ರಾಸ್ಥಳ, ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಹನೂರು: ತಾಲೂಕಿನ ಧಾರ್ಮಿಕ ಯಾತ್ರಾಸ್ಥಳ, ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಅತಿಥಿಗೃಹದ ಸಮೀಪದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸ್ಥಳ ಪರಿಶೀಲಿಸಿ ಮಾತನಾಡಿ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಆಯೋಜಿಸಿರುವುದು ಉತ್ತಮ ವಿಚಾರ ಎಂದ ಅವರು, ಚಾ.ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅವರಿಂದ ಕಾರ್ಯಕ್ರಮ ಸಂಬಂಧ ಅಗತ್ಯ ಮಾಹಿತಿ ಪಡೆದುಕೊಂಡರು. ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಅವರಿಗೆ ಪತ್ರಕರ್ತರಿಗೆ ಪ್ರಾಧಿಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವಂತೆ ತಿಳಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮಾತನಾಡಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಪ್ರಾಧಿಕಾರದಿಂದ ವಸತಿ, ದರ್ಶನ, ದಾಸೋಹ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯ ಒದಗಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಿಂದ ನಮ್ಮ ಕ್ಷೇತ್ರಕ್ಕೆ ಬರುವ ಅತಿಥಿ ಗಣ್ಯರು, ಪತ್ರಕರ್ತರು, ಪ್ರಶಸ್ತಿ ಪುರಸ್ಕೃತರಿಗೆ ಯಾವುದೇ ಲೋಪದೋಷಗಳು ಆಗದಂತೆ, ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಿದ್ಧತೆ ಬಗ್ಗೆ ಈಗಾಗಲೇ ಸಭೆ ನಡೆಸಿ ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ ಎಂದರು. ಈ ವೇಳೆ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಎಇಇ ಚಿನ್ನಣ್ಣ ಇತರರು ಹಾಜರಿದ್ದರು.

7ಸಿಎಚ್ಎನ್12

ಮಲೆಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಸಂಬಂಧ ಶಾಸಕ ಎಂ.ಆರ್‌. ಮಂಜುನಾಥ್‌ ಪರಿಶೀಲಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಇತರರಿದ್ದರು.