ಸಾರಾಂಶ
ಕರ್ನಾಟಕ ರಾಜ್ಯ ಮಹಾಮಂಡಳ, ದಾವಣಗೆರೆ, ಉತ್ತರ ಕನ್ನಡ ಜಿಲ್ಲಾ ಸಹಕಾರ ಒಕ್ಕೂಟದಿಂದ ದಾಂಡೆಲಿಯಲ್ಲಿ ವಿಶೇಷ ಕಾರ್ಯದಕ್ಷತೆ ಶಿಬಿರ ನಡೆಯಿತು.
ಕನ್ನಡಪ್ರಭ ವಾರ್ತೆ ದಾವಣಗೆರೆ
ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ಎರಡು ದಿನಗಳ ವೃತ್ತಿ ಕೌಶಲ್ಯ ಕುರಿತು ರಾಜ್ಯ ಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರವು ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೆಲಿಯಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಉತ್ತರ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿ., ಚನ್ನಗಿರಿ (ತುಮ್‌ಕೋಸ್ ಲಿ.) ಇವರ ಸಹಯೋಗದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಬಾಪೂಗೌಡ ಡಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ ಶಿಬಿರವನ್ನು ತುಮ್‌ಕೋಸ್‌ನ ಚನ್ನಗಿರಿಯ ವ್ಯವಸ್ಥಾಪಕ ನಿರ್ದೇಶಕ ಎನ್.ಪಿ.ಮಧು ಶಿಬಿರ ಉದ್ಘಾಟಿಸಿದರು. ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ, ಉತ್ತರ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಸಿಇಓ ಗೋಪಾಲ, ಲೆಕ್ಕ ಪರಿಶೋಧಕ ಬೆಂಗಳೂರಿನ ಅನಿಲ್ ಭಾರದ್ವಾಜ್, ಕಾರ್ಪೊರೇಟ್ ಟ್ರೈನರ್ ಧಾರವಾಡದ ಮಹೇಶ ಮಾಶಾಳ್, ಸಂಚಾಲಕರಾದ ಮಂಗಳಗೌಡ ದಾನಪ್ಪಗೌಡ್ರು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಜಿಲ್ಲಾ ಸಹಕಾರ ಶಿಕ್ಷಕ ಕೆ.ಎಚ್.ಸಂತೋಷಕುಮಾರ ಸೇರಿದಂತೆ ಸಹಕಾರ ಸಂಘದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.