ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ: ಡಾ.ಜಾನಪದ ಎಸ್.ಬಾಲಾಜಿ

| Published : Jul 17 2025, 12:30 AM IST

ಸಾರಾಂಶ

ತರೀಕೆರೆ, ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಕನ್ನಡ ಜಾನಪದ ಪರಿಷತ್ ನ ಮಹಿಳಾ ಘಟಕದ ಪದವಿ ಪ್ರದಾನ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಬುಧವಾರ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ನಡೆದ ಕನ್ನಡ ಜಾನಪದ ಪರಿಷತ್, ಚಿಕ್ಕಮಗಳೂರು ಜಿಲ್ಲಾ ಮಹಿಳಾ ಘಟಕ, ತರೀಕೆರೆ ತಾಲೂಕು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಪದವಿ ಪ್ರಧಾನ ಸಮಾರಂಭದ ಉದ್ಘಾಟಿಸಿ ಮಾತನಾಡಿದರು. ಜನಪದ ಕಲೆಗಳು ಹೇರಳವಾಗಿವೆ. ಮನೆ ಮನಸ್ಸಿಗೂ ಜಾನಪದ ತಲುಪಬೇಕು, ಮಹಿಳಾ ಜಾನಪದ ಸಬಲೀಕರಣ ವಾಗಬೇಕು. ಶಾಲಾ ಕಾಲೇಜುಗಳಿಂದ ಒಳಗೊಂಡು ವಿಶ್ವವಿದ್ಯಾನಿಲಯದವರೆಗೆ ಮಹಿಳೆಯರು ಸ್ಥಾನ ಅಲಂಕರಿಸಬೇಕು. ಕರ್ನಾಟಕ ಜಾನಪದ ಅಕಾಡೆಮಿಯಲ್ಲಿ ಮಹಿಳೆಯರಿಗೆ ಸ್ಥಾನ ದೊರೆತು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಹುದ್ದೆ ಲಭಿಸಬೇಕು. ಈ ಹಿನ್ನಲೆಯಲ್ಲಿ ತರೀಕೆರೆಯಲ್ಲಿ ಕನ್ನಡ ಜಾನಪದ ಪರಿಷತ್ತು ಮಹಿಳಾ ಘಟಕದಿಂದ ರಾಜ್ಯ ಮಹಿಳಾ ಜಾನಪದ ಸಮ್ಮೇಳನವನ್ನು ಕ್ಷೇತ್ರ ಶಾಸಕ ಜಿ.ಎಚ್.ಶ್ರೀನಿವಾಸ್ ಸಂಪೂರ್ಣ ಸಹಕಾರದೊಂದಿದೆ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.

ಜಾನಪದಕ್ಕೆ ಬಹು ದೊಡ್ಡ ಸಂಸ್ಕೃತಿ ಮತ್ತು ಸಂಸ್ಕಾರ ಇದೆ, ಮನೆಯಲ್ಲಿ ಮಕ್ಕಳಿಗೆ ಶಿಶುಪ್ರಾಸ ಗೀತೆಗಳನ್ನು ಹೇಳಿಕೊಡಬೇಕು ಎಂದು ಸಲಹೆ ಮಾಡಿದರು.ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ ಜಾನಪದ ಕಲೆಯನ್ನು ಪೋಷಿಸಬೇಕು. ಮಹಿಳೆಯರಿಗೆ ಹೆಚ್ಚಿನ ಸ್ಥಾನ, ಮೊದಲನೇ ಅದ್ಯತೆ ಕೊಡಬೇಕು. ಶಾಸಕ ಜಿ.ಎಚ್.ಶ್ರೀನಿವಾಸ್ ತರೀಕೆರೆ ಪಟ್ಟಣದ ಅಭಿವೃದ್ಧಿಗಾಗಿ ₹188 ಕೋಟಿ ರು ಅನುದಾನ ತಂದಿದ್ದಾರೆ ಎಂದು ಹೇಳಿದರು.ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಮಾತನಾಡಿ ಮಕ್ಕಳಿಗೆ ಜಾನಪದ ಕಲಿಸಿಕೊಡಬೇಕು. ಶಾಸಕ ಜಿ.ಎಚ್.ಶ್ರೀನಿವಾಸ್ ಸಹಕಾರದಿಂದ ತರೀಕೆರೆ ಪಟ್ಟಣದಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಆಯೋಜಿಸಿ ತಾವು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ ಜಾನಪದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಒಳಗೊಂಡಿದೆ. ತರೀಕೆರೆ ತಾಲೂಕು ಜಾನಪದ ಕಲೆ ಪೋಷಿಸಿಕೊಂಡು ಬಂದಿದೆ. ತರೀಕೆರೆ ಪಟ್ಟಣದ ಪ್ರಮುಖ ರಸ್ತೆಗೆ ಜಾನಪದ ಸಾಹಿತ್ಯ ರತ್ನ ಕೆ.ಆರ್.ಲಿಂಗಪ್ಪ ಅವರ ಹೆಸರು ನಾಮಕರಣ ಮಾಡಲು ಪುರಸಭೆಯಿಂದ ಪೌರಾಡಳಿತ ನಿರ್ದೇಶನಾಲಯಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಶೀಘ್ರದಲ್ಲೆ ಪಟ್ಟಣದ ಪ್ರಮುಖ ರಸ್ತೆಗೆ ಜಾನಪದ ಸಾಹಿತ್ಯ ರತ್ನ ಕೆ.ಆರ್.ಲಿಂಗಪ್ಪ ಹೆಸರು ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು. ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂದ ಜಯವು ಜಾನಪದಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು.ಕನ್ನಡಶ್ರೀ ಬಿ.ಎಸ್.ಭಗವಾನ್ ಮಾತನಾಡಿ ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಪುನರುತ್ಥಾನಗೊಳಿಸುವ ಕಾರ್ಯಕ್ರಮ ವಾಗಿದೆ, ಮಹಿಳೆಯರನ್ನು ಮುಂಚೂಣಿಗೆ ತರಬೇಕು ಎಂದು ಶುಭ ಹಾರೈಸಿದರು.ತರೀಕೆರೆ ಮಹಿಳಾ ಘಟಕದ ಅಧ್ಯಕ್ಷೆ ಲೀಲಾ ಸೋಮಶೇಖರಯ್ಯ ಮಾತನಾಡಿ ನನ್ನನ್ನು ಕನ್ನಡ ಜಾನಪದ ಪರಿಷತ್ತು ಮಹಿಳಾ ಘಟಕದ ತರೀಕೆರೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದರು.ಚಿಕ್ಕಮಗಳೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ತು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂದು ಮಹಿಳಾ ಘಟಕದ ಪದಗ್ರಹಣ ಸಮಾರಂಭ ನೆಡೆಯುತ್ತಿರುವುದು ನನೆಗೆ ತುಂಬಾ ಖುಷಿಯಾಗಿದೆ. ತರೀಕೆರೆಯಲ್ಲಿ ರಾಜ್ಯಮಟ್ಟದ ಕನ್ನಡ ಜನಪದ ಸಮ್ಮೇಳನ ಮಾಡಬೇಕೆಂಬ ಉದ್ದೇಶದಿಂದ ಜಿಲ್ಲಾಧ್ಯಕ್ಷಳಾದ ನನಗೆ ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಸಮ್ಮೇಳನ ಮಾಡಿ ನಾನು ನಿಮ್ಮ ಜೊತೆಯಲ್ಲಿ ಇದ್ದೇನೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪುರಸಭಾ ಮಾಜಿ ಅಧ್ಯಕ್ಷ, ಗಾಯಕ ಟಿ.ಕೆ..ರಮೇಶ್ ಅವರನ್ನು ಸನ್ಮಾನಿಸಲಾಯಿತು.ರಾಷ್ಟ್ರಪತಿ ಪದಕ ಪುರಸ್ಕೃತ ಲಕ್ಷ್ಮೀ ದೇವಮ್ಮ, ಚಿಕ್ಕಮಗಳೂರು ಕಜಾಪ ಮಹಿಳಾ ಘಟಕ ಗೌರವಾದ್ಯಕ್ಷೆ ಸವಿತಾ ಸತ್ಯನಾರಾಯಣ, ರಾಮನಗರ ಜಿಲ್ಲೆ ಕಜಾಪ ಜಿಲ್ಲಾ ಧ್ಯಕ್ಷ ಕೆ.ಸಿ.ಕಾಂತಪ್ಪ, ಮಂಡ್ಯ ಜಿಲ್ಲೆ ಕಜಾಪ ಜಿಲ್ಲಾಧ್ಯಕ್ಷ ವಿಜಯ ಕೊಪ್ಪ ಮತ್ತಿತರರು ಮಾತನಾಡಿದರು.ಪುರಸಭೆ ಸದಸ್ಯೆ ಗಿರಿಜಾ ಪ್ರಕಾಶ್ ವರ್ಮ, ಮಾಜಿ ಪುರಸಭಾಧ್ಯಕ್ಷ ಟಿ.ಎಸ್.ರಮೇಶ್, ಪ್ರಹರ್ಷಿತ ವಿದ್ಯಾ ಸಂಸ್ಥೆ ಅಧ್ಯಕ್ಷ ಟಿ.ಆರ್.ಸೋಮಶೇಖರಯ್ಯ, ಟಿ.ಎಸ್.ಅನೂಪ್, ಕಲಾ ಮಾಲತೇಶ್, ವಿಜಯಕುಮಾರಿ, ಶ್ವೇತಾ, ಅಂಜಲಿ ಮತ್ತಿತರರು ಭಾಗವಹಿಸಿದ್ದರು.

16ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ನಡೆದ ಕಾರ್ಯಕ್ರಮವನ್ನು ಬೆಂಗಳೂರು ಕಜಾಪ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ದ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್, ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್, ಚಿಕ್ಕಮಗಳೂರು ಜಿಲ್ಲಾ ಕಜಾಪ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ, ಲೀಲಾ ಸೋಮಶೇಖರಯ್ಯ ಮತ್ತಿತರರು ಇದ್ದರು.