ರಾಜ್ಯಮಟ್ಟದ ಯುವಜನೋತ್ಸವ: ವಿದ್ಯಾರ್ಥಿಗಳಿಂದ ಬೃಹತ್‌ ಜಾಥಾ

| Published : Jan 04 2025, 12:33 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜ.5 ಮತ್ತು 6ರಂದು ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಶುಕ್ರವಾರ ಮೋತಿ ವೀರಪ್ಪ ಕಾಲೇಜು ಸಮೀಪದ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಿತು.

- ನಾಳೆ, ನಾಡಿದ್ದು ಯುವಜನೋತ್ಸವ । ಜಾಥಾಕ್ಕೆ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಸಾಥ್‌

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜ.5 ಮತ್ತು 6ರಂದು ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಶುಕ್ರವಾರ ಮೋತಿ ವೀರಪ್ಪ ಕಾಲೇಜು ಸಮೀಪದ ಗುಂಡಿ ವೃತ್ತದಿಂದ ಸಾವಿರಾರು ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ನಡೆಯಿತು.

ಜಿಪಂ ಸಿಇಒ ಡಾ.ಸುರೇಶ್ ಬಿ. ಇಟ್ನಾಳ್ ಗುಂಡಿ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ದಾವಣಗೆರೆ ನಗರ ಹಾಗೂ ಜಿಲ್ಲೆಯ ಯುವಕ-ಯುವತಿಯರು ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು 2 ದಿನಗಳ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಬೇಕು. ಜಾನಪದ ನೃತ್ಯ, ಜಾನಪದ ಗೀತೆ, ವಿಜ್ಞಾನ ವಸ್ತುಪ್ರ ದರ್ಶನ, ಕವನ ರಚನೆ, ಕಥೆ ಬರೆಯುವುದು, ಚಿತ್ರಕಲೆ, ಘೋಷಣ ಸ್ಪರ್ಧೆಗಳ ಜೊತೆಗೆ ಸಂಜೆ ನಡೆಯುವ ಮಣಿಕಾಂತ್ ಕದ್ರಿ ಅವರ ಸಂಗೀತ ಕಾರ್ಯಕ್ರಮ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮ ಸದುಪಯೋಗ ಮಾಡಿಕೊಳ್ಳಲು ಸಲಹೆ ನೀಡಿದರು.

ಜಾಥಾದಲ್ಲಿ ಸುಮಾರು 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ಘೋಷವಾಕ್ಯಗಳ ಫಲಕ ಹಿಡಿದು ಘೋಷಣೆಗಳ ಕೂಗಿದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ನೀರನ್ನು ಉಳಿಸಿ ಭೂಮಿಯನ್ನು ರಕ್ಷಿಸಿ, ''''''''ಸ್ವಚ್ಛ ಮತ್ತು ಹಸಿರು, ಅದು ನಮ್ಮ ಕನಸು'''''''' ಮತ್ತು ''''''''ಉಸಿರಾಡಲು ಪ್ರೀತಿಸಿ, ಮರಗಳನ್ನು ಉಳಿಸಿ'''''''' ''''''''ಮಾಲಿನ್ಯವನ್ನು ಉಳಿಸಿ, ಬದುಕಲು ಪ್ರಾರಂಭಿಸಿ''''''''. ವಿದ್ಯಾರ್ಥಿನಿಯರು ''''''''ಹಣದಾಸೆಗೆ ಬಳಿಯಾಗದೆ ಯೋಚಿಸಿ ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದು ಕೂಗುತ್ತಾ ಸಾಗಿದರು.

ಕಾಲ್ನಡಿಗೆ ಜಾಥಾದಲ್ಲಿ ಅತ್ಯುತ್ತಮವಾಗಿ ಸಂಘಟಿಸಿದ ಉತ್ತಮ ತಂಡಕ್ಕೆ ಅಭಿನಂದನಾ ಪತ್ರವನ್ನು ಶಾಸಕರಾದ ಬಿ.ಪಿ ಹರೀಶ್ ವಿತರಿಸಿದರು. ಪೊಲೀಸ್‌ ತಂಡದ ಎಲ್ಲ ಸಿಬ್ಬಂದಿ ಕಾಲ್ನಡಿಗೆಯಲ್ಲಿ ಶಿಸ್ತಿನ ಸಿಪಾಯಿಗಳಂತೆ ನಡೆದುಕೊಂಡು ರಸ್ತೆ ಸುರಕ್ಷತೆ ಅರಿವು ಮೂಡಿಸಿದರು.

ಜಾಥಾವು ಗುಂಡಿ ವೃತ್ತದಿಂದ ವಿದ್ಯಾರ್ಥಿ ಭವನ, ಡಾ.ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಮಹಾನಗರ ಪಾಲಿಕೆ ಮುಂಭಾಗದಿಂದ ಎವಿಕೆ ರಸ್ತೆಯ ಮೂಲಕ ಮೋತಿ ವೀರಪ್ಪ ಕಾಲೇಜಿನ ಆವರಣ ತಲುಪಿತು. ಜಾಥಾದಲ್ಲಿ 75 ವರ್ಷದ ಹಿರಿಯ ವ್ಯಕ್ತಿ ನಾಗರಾಜ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಜಿ.ಮಂಜುನಾಥ್, ಮಹಾನಗರ ಪಾಲಿಕೆ ಮಹಾಪೌರರಾದ ಕೆ.ಚಮನ್‌ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ, ಆಯುಕ್ತೆ ರೇಣುಕಾ, ಪಾಲಿಕೆ ಸದಸ್ಯರು, ಜಿಪಂ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ, ಸಿಪಿಒ ಮಲ್ಲಾ ನಾಯ್ಕ್, ಡಿಡಿಪಿಯು ಕರಿಸಿದ್ದಪ್ಪ, ಡಿಡಿಪಿಐ ಕೊಟ್ರೇಶ್, ಡಿಆರ್‌ಸಿಎಸ್ ಮಧು ಶ್ರೀನಿವಾಸ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ, ಯುವ ಪ್ರಶಸ್ತಿ ಪುರಸ್ಕೃತ ಮಾಗನಹಳ್ಳಿ ಮಂಜುನಾಥ ಮತ್ತು ನಗರದ ಪದವಿಪೂರ್ವ, ಪದವಿ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರಿ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.

- - - -3ಕೆಡಿವಿಜಿ35, 36:

ದಾವಣಗೆರೆಯಲ್ಲಿ ಶುಕ್ರವಾರ ಯುವಜನೋತ್ಸವ ಅಂಗವಾಗಿ ನಡೆದ ಕಾಲ್ನಡಿಗೆ ಜಾಥಾಗೆ ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಚಾಲನೆ ನೀಡಿದರು.