ಇಂಗ್ಲಿಷ್‌ ವ್ಯಾಮೋಹದಿಂದ ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿ: ಸಮನ್ವಯಾಧಿಕಾರಿ ನಾಗರಾಜ್

| Published : Sep 25 2024, 12:51 AM IST

ಇಂಗ್ಲಿಷ್‌ ವ್ಯಾಮೋಹದಿಂದ ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿ: ಸಮನ್ವಯಾಧಿಕಾರಿ ನಾಗರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಪೋಷಕರ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿರುವುದು ವಿಷಾದನೀಯ ಸಂಗತಿ ಎಂದು ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ನಾಗರಾಜ್ ಅಭಿಪ್ರಾಯಪಟ್ಟರು. ಸೂಲಿಬೆಲೆಯಲ್ಲಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗುರುವಂದನಾ ಕಾರ್ಯಕ್ರಮ ಕನ್ನಡಪ್ರಭ ವಾರ್ತೆ ಸೂಲಿಬೆಲೆ

ಪೋಷಕರ ಆಂಗ್ಲ ಮಾಧ್ಯಮ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪುತ್ತಿರುವುದು ವಿಷಾದನೀಯ ಸಂಗತಿ ಎಂದು ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ನಾಗರಾಜ್ ಅಭಿಪ್ರಾಯಪಟ್ಟರು.

ಹೋಬಳಿ ಅನುಪಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಎಲ್ಲಾ ಶಿಕ್ಷಕರು ಪೂರ್ಣ ಪ್ರಮಾಣದ ತರಬೇತಿ ಪಡೆದು ನೇಮಕ ಮಾಡಲಾಗಿರುತ್ತದೆ. ನಮ್ಮೂರ ಶಾಲೆ ನಮ್ಮ ಹೆಮ್ಮ ಎಂಬ ಅಭಿಮಾನ ರೂಢಿಸಿಕೊಳ್ಳಬೇಕು ಎಂದರು.

ಅನುಪನಹಳ್ಳಿ ಶಾಲೆಯಲ್ಲಿ ಓದಿದ ೨೦೦೫-೦೬ನೇ ಸಾಲಿನಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿಗಳು ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಎಲ್ಲರೂ ಒಗ್ಗೂಡಿ ಗುರುವಂದನಾ ಕಾರ್ಯಕ್ರಮ ಆಯೋಜಿಸಿದ್ದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗೌರೀಶ್, ಉಮೇಶ್, ಸಂಗೀತಾ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ ಮಾಡಿದರು. ಹಳೆ ವಿದ್ಯಾರ್ಥಿಗಳು ಕಲಿಕಾ ಸಾಮಗ್ರಿ ನೀಡಿದರು. ಶಾಲೆಯ ಹಳೆಯ ಶಿಕ್ಷಕರಾದ ವೀರಪ್ಪ, ವೆಂಕಟೇಶ್, ಪುಂಡಲಿಕದೊಡ್ಡಿ, ನಲ್ಲೂರು ಮಂಜುನಾಥ್ ಅವರಿಗೆ ಸನ್ಮಾನಿಸಲಾಯಿತು. ಶಿಕ್ಷಕರ ಸಂಘ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ, ಸಿ.ಆರ್‌.ಪಿ. ಮಂಜುನಾಥ್, ಡಾ.ಎ.ವಿ.ನಾರಾಯಣಸ್ವಾಮಿ, ಪೊಲೀಸ್ ಜಯರಾಮ್, ಸಹ ಶಿಕ್ಷಕರಾದ ರಾಮಪ್ಪ, ಛಾಯಾಕುಮಾರ್, ರಾಧಮ್ಮ, ವೇದ, ಅರ್ಚನಾ, ಸುನಿತಾ, ಹಳೇ ವಿದ್ಯಾರ್ಥಿಗಳಾದ ಅರುಣ್, ಶ್ರೀಧರ್, ವೇಣು, ಲಕ್ಷ್ಮೀನಾರಾಯಣ್, ಗಂಗಾಧರ್, ವಿನಯ್ ಇತರರು ಇದ್ದರು. .