ಸಾರಾಂಶ
ಕಂಪ್ಯೂಟರ್ ಜ್ಞಾನವಿಲ್ಲದವರನ್ನು ಅನಕ್ಷರಸ್ಥರಂತೆ ನೋಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಇಂದಿನ ಸ್ಪರ್ಧಾತ್ಮಕ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ಜಿ. ಪಾಟೀಲ ಹೇಳಿದರು.
ನರೇಗಲ್ಲ: ಕಂಪ್ಯೂಟರ್ ಜ್ಞಾನವಿಲ್ಲದವರನ್ನು ಅನಕ್ಷರಸ್ಥರಂತೆ ನೋಡುವ ಪರಿಸ್ಥಿತಿ ಬಂದಿದೆ. ಹೀಗಾಗಿ ಇಂದಿನ ಸ್ಪರ್ಧಾತ್ಮಕ, ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅಗತ್ಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ಜಿ. ಪಾಟೀಲ ಹೇಳಿದರು.ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್‌ನವರು ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಕ್ಕೆ ಉಚಿತವಾಗಿ ನೀಡಿದ ಕಂಪ್ಯೂಟರ್‌ಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಪದವಿ ಆರಂಭಿಸಿ ಗ್ರಾಮೀಣ ಭಾಗದ ಬಡ ಹಾಗೂ ಹಿಂದುಳಿದ ಮಕ್ಕಳ ಕಲಿಕೆಗೆ ಇಲ್ಲಿನ ಪ್ರಾಧ್ಯಾಪಕರು ಮುಂದಾಗಿರುವುದು ಶ್ಲಾಘನೀಯ. ಅದಕ್ಕೆ ಅಗತ್ಯವಾದ ಆಧುನಿಕ ತಂತ್ರಜ್ಞಾನ ಒಳಗೊಂಡು ಕಂಪ್ಯೂಟರ್‌ಗಳನ್ನು ಕೊಡಿಸುವಂತೆ ಬೇಡಿಕೆಯಿಟ್ಟಿದ್ದರು. ಅದಕ್ಕೆ ವಿಶೇಷ ಆಸಕ್ತಿ ವಹಿಸಿದ ನಮ್ಮ ಕ್ಷೇತ್ರದ ಶಾಸಕರಾದ ಜಿ. ಎಸ್. ಪಾಟೀಲರು ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲ ಎಸ್. ಎಲ್. ಗುಳೇದಗುಡ್ಡ ಮುಂತಾದವರು ಮಾತನಾಡಿದರು. ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ಅಲ್ಲಾಬಕ್ಷಿ ನದಾಫ್, ಮೈಲಾರಪ್ಪ ವೀ. ಚಳ್ಳಮರದ, ಸಂತೋಷ ಹನಮಸಾಗರ, ಸದ್ದಾಂ ನಶೇಖಾನ್, ವೀರನಗೌಡ ಪಾಟೀಲ, ಗಿರೀಶ ಹೆಗ್ಗಡಿನ್ನಿ, ಎನ್ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಶಿವಮೂರ್ತಿ ಕುರೇರ, ಸುನಂದಾ ಮುಂಜಿ, ಜಯಶ್ರೀ ಮುತಗಾರ, ಶಶಿಕಲಾ ವಿ. ಎಸ್, ಕೆ. ಆರ್. ಪಾಟೀಲ, ನಸರೀನಾಬಾನು ಜಮಾದಾರ, ವಿರೂಪಾಕ್ಷ, ಶಿವಪ್ಪ ಕುರುಬರ, ಅನೀಲಕುಮಾರ, ಅಯ್ಯಪ್ಪ, ವಿರೂಪಾಕ್ಷ, ವಿ.ಸಿ. ಇಲ್ಲೂರ, ವಿ.ಕೆ. ಸಂಗನಾಳ, ಕಿರಣ ರಂಜಣಗಿ, ಎನ್. ಎಸ್. ಹೊನ್ನೂರ, ಚಂದ್ರು ಸಂಶಿ, ಬಸವರಾಜ ಎಸ್. ಮಡಿವಾಳರ, ಬಿ.ಕೆ. ಕಂಬಳಿ, ಶಂಕರ ನರಗುಂದ, ಎಂ.ಎಫ್. ತಹಶೀಲ್ದಾರ, ಕೆ.ಎನ್. ಕಟ್ಟಿಮನಿ ಇದ್ದರು.