ರಾಜ್ಯ ಮುಕ್ತ ವಿವಿ: ಮಾರ್ಗದರ್ಶಿಗೆ ಬೆಳ್ಳಿಹಬ್ಬದ ಸಂಭ್ರಮ

| Published : Jun 12 2024, 12:30 AM IST

ರಾಜ್ಯ ಮುಕ್ತ ವಿವಿ: ಮಾರ್ಗದರ್ಶಿಗೆ ಬೆಳ್ಳಿಹಬ್ಬದ ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವವಿದ್ಯಾನಿಲಯದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯುಜಿಸಿಯ 2023ರ ನಿಯಮಾವಳಿಯ ಪ್ರಕಾರ ಪ್ರತಿ ವಿಶ್ವವಿದ್ಯಾನಿಲಯದಲ್ಲಿ ಕಲಿಕಾರ್ಥಿ ಕಲ್ಯಾಣ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿದ್ಯಾರ್ಥಿಗಳ ಜೊತೆ ನಿರಂತರ ಹಾಗೂ ನೇರ ಸಂರ್ಪಕವನ್ನಿಟ್ಟುಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಜೂನ್ 1996 ರಲ್ಲಿ ಪ್ರಾರಂಭವಾದಾಗಿನಿಂದ ಇಂದಿನವರೆಗೂ ಎಲ್ಲ ವರ್ಗದ ಜನರಿಗೆ ಯಾವುದೇ ತಾರತಮ್ಯವಿಲ್ಲದೇ ಉನ್ನತ ಶಿಕ್ಷಣವನ್ನು ದೂರ ಶಿಕ್ಷಣದ ಮುಖಾಂತರ ನೀಡುತ್ತಾ ಬಂದಿದೆ.

ಇದರಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಹಲವಾರು ಕ್ಷೇತ್ರಗಳಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿಶ್ವವಿದ್ಯಾನಿಲಯವು ಶೈಕ್ಷಣಿಕ ಆವಿಷ್ಕಾರಗಳಿಗೆ ಹೆಸರುವಾಸಿಯಾದ ವಿಶ್ವವಿದ್ಯಾನಿಲಯವಾಗಿದ್ದು, ವಿದ್ಯಾರ್ಥಿಗಳಿಗಾಗಿ, ಅವರ ಶೈಕ್ಷಣಿಕ ಸಹಕಾರಕ್ಕಾಗಿ, ಪ್ರತ್ಯೇಕ ನಿರ್ದೇಶನಾಲಯವನ್ನು ಪ್ರಾರಂಭಿಸುವ ಮೂಲಕ ದೂರಶಿಕ್ಷಣದ ಇತಿಹಾಸದಲ್ಲಿ ಹೊಸ ಹೆಜ್ಜೆಯಾಗಿ ಮುನ್ನೆಡೆಯುತ್ತಿದೆ.

ವಿಶ್ವವಿದ್ಯಾನಿಲಯದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯುಜಿಸಿಯ 2023ರ ನಿಯಮಾವಳಿಯ ಪ್ರಕಾರ ಪ್ರತಿ ವಿಶ್ವವಿದ್ಯಾನಿಲಯದಲ್ಲಿ ಕಲಿಕಾರ್ಥಿ ಕಲ್ಯಾಣ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿದ್ಯಾರ್ಥಿಗಳ ಜೊತೆ ನಿರಂತರ ಹಾಗೂ ನೇರ ಸಂರ್ಪಕವನ್ನಿಟ್ಟುಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದೆ. ವಿದ್ಯಾರ್ಥಿಗಳಿಗಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಮಾರ್ಗದರ್ಶಿ ಎಂಬ ವಿದ್ಯಾರ್ಥಿ- ಅಧಿಕಾರಿ ನೇರ ಸಂವಾದ ಕಾರ್ಯಕ್ರಮ ಆರಂಭಿಸಲಾಗಿದೆ. ಕಲಿಕಾರ್ಥಿ ಕಲ್ಯಾಣ ಕೇಂದ್ರವು ಮಾರ್ಗದರ್ಶಿ ಕಾರ್ಯಕ್ರಮವನ್ನು ಪ್ರತಿ ಸಪ್ತಾಹದ ಮೊದಲ ದಿನ ಸೋಮವಾರದಂದು ಆಯೋಜಿಸುತ್ತಾ ಬಂದಿದ್ದು,ಇದರಿಂದ ವಿದ್ಯಾರ್ಥಿಗಳು ಮಾರ್ಗದರ್ಶನ/ ಸಮಸ್ಯೆಗಳನ್ನು ದೂರವಾಣಿ ಮುಖಾಂತರ ನೇರವಾಗಿ ಅಧಿಕಾರಿಗಳೊಂದಿಗೆ ಮಾತನಾಡುವ ಮೂಲಕ ಪರಿಹರಿಸಿಕೊಳ್ಳುತ್ತಿದ್ದಾರೆ.ಆ ಮೂಲಕ ದಾಖಲಾಗುವ ವಿದ್ಯಾರ್ಥಿಗಳ ಸಮಸ್ಯೆಗಳು ಹಂತಹಂತವಾಗಿಕಡಿಮೆಯಾಗುತ್ತಾ ಬಂದಿರುವುದು ಶೈಕ್ಷಣಿಕ ಪ್ರಗತಿಯ ಸೂಚಕವಾಗಿದೆ.

ಕಲಿಕಾರ್ಥಿಕಲ್ಯಾಣ ಕೇಂದ್ರವುರಾಜ್ಯ ವ್ಯಾಪಿ ಕೇಂದ್ರಕಚೇರಿ ಮತ್ತು ಪ್ರಾದೇಶಿಕ ಕೇಂದ್ರಗಳ ಜೊತೆಗೂಡಿ ವಿದ್ಯಾರ್ಥಿಗಳಿಗೆ ವಿವಿಧ ರೂಪಗಳಲ್ಲಿ ಮಾರ್ಗದರ್ಶನ/ಬೆಂಬಲವನ್ನು ನೀಡುತಿದ್ದು, ಅವುಗಳು ಈ ಕೆಳಕಂಡಂತಿವೆ:

ವಿಶ್ವವಿದ್ಯಾನಿಲಯದ ಕಾರ್ಯಕ್ರಮಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಮಾಹಿತಿ/ಮಾರ್ಗದರ್ಶನ

ಶೈಕ್ಷಣಿಕ ಕಾರ್ಯಕ್ರಮಗಳಿಗೆ ಈಗಾಗಲೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದು

ಹಳೆ ವಿದ್ಯಾರ್ಥಿಗಳಿಗೆ ಸಹಾಯ ಮತ್ತು ಬೆಂಬಲ

ಕುಂದುಕೊರತೆಗಳನ್ನು ಪರಿಹರಿಸುವುದಕ್ಕೆಮೊದಲ ಪ್ರಾಶಸ್ತ್ಯ ನೀಡುವುದು.

ಕಲಿಕಾರ್ಥಿಕಲ್ಯಾಣಕೇಂದ್ರದಕಾರ್ಯನಿರ್ವಹಣೆಯಜೊತೆಗೆ ವಿದ್ಯಾರ್ಥಿಗಳಿಗೆ ಅವರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಸಹಾಯ ಪಡೆಯಲು ಯುಜಿಸಿ ನಿರ್ದೇಶನದಂತೆಒಬ್ಬ ಸಾರ್ವಜನಿಕತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಅವರು ವಿಶ್ವವಿದ್ಯಾನಿಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆಗಳಿಗೆ ಸ್ಪಂದಿಸುತ್ತಾ/ ಮಾರ್ಗದರ್ಶನ ನೀಡುತ್ತಾ ಬಂದಿರುತ್ತಾರೆ.ಕಲಿಕಾರ್ಥಿಕಲ್ಯಾಣಕೇಂದ್ರವುವರ್ಷವಿಡೀ ವಿದ್ಯಾರ್ಥಿಗಳ ಜೊತೆ ನಿರಂತರ ಸಂಪರ್ಕ ಸಾಧಿಸಿ, ಅವರ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ, ಮುಂದುವರಿದಂತೆ ಮಾರ್ಗದರ್ಶನ ನೀಡುತ್ತಾ ಸಾಗುತ್ತಿದೆ. ವಿದ್ಯಾರ್ಥಿಗಳು ದೂರವಾಣಿ, ಈ-ಮೇಲ್ ಹಾಗೂ ಖುದ್ದುಕೇಂದ್ರವನ್ನು ಸಂಪರ್ಕಿಸಿ, ಪರಿಹಾರ ಪಡೆಯುತ್ತಿದ್ದಾರೆ.25ನೇ ಮಾರ್ಗದರ್ಶಿ ಕಾರ್ಯಕ್ರಮ

ಕಲಿಕಾರ್ಥಿ ಕಲ್ಯಾಣ ಕೇಂದ್ರದಲ್ಲಿ ಜೂ.13 ರಂದು 25ನೇ ಮಾರ್ಗದರ್ಶಿ ಮಾರ್ಗದರ್ಶನ ಆಯೋಜಿಸಲಾಗಿದೆ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಉದ್ಘಾಟಿಸಲಿದ್ದು, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿರುವರು.

ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ, ಪರೀಕ್ಷಾಂಗ ಕುಲಸಚಿವ ಡಾ. ಎಚ್. ವಿಶ್ವನಾಥ, ಕೇಂದ್ರದ ಸಂಯೋಜನಾಧಿಕಾರಿ ಡಾ.ಸುಧಾಕರ ಹೊಸಳ್ಳಿ, ಸಹಾಯಕ ಕುಲಸಚಿವೆ ಕೆ.ಅನ್ನಪೂರ್ಣಮ್ಮ, ಅಧೀಕ್ಷಕರು ಹಾಗೂ ಇತರೆ ಸಿಬ್ಬಂದಿ ಭಾಗವಹಿಸುವರು.

ವಿದ್ಯಾರ್ಥಿಗಳು ಅಂದು ಬೆಳಗ್ಗೆ 11:00 ಗಂಟೆಗೆ ಕಲಿಕಾರ್ಥಿಕಲ್ಯಾಣ ಕೇಂದ್ರದ ಸಹಾಯವಾಣಿ ಸಂಖ್ಯೆ: 8690544544 ಗೆ ಕರೆ ಮಾಡುವ ಮೂಲಕವಿದ್ಯಾರ್ಥಿಗಳು ನೇರವಾಗಿ ಕುಲಪತಿ ಹಾಗೂ ಇತರ ಅಧಿಕಾರಿಗಳ ಜೊತೆ ಸಂವಹನ ಮಾಡಿ, ಸದರಿಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.