ಸಾರಾಂಶ
ಬೆಂಗಳೂರನ್ನು ಹೊರತು ಪಡಿಸಿ ಹೊರ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಪಂದ್ಯಾವಳಿಗೆ ಸುಮಾರು 80ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವರು. ಒಟ್ಟು 6 ವಿಭಾಗಗಳಲ್ಲಿ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆ ನಡೆಯುತ್ತವೆ. ಆರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ.
ಕನ್ನಡಪ್ರಭ ವಾರ್ತೆ ದಾವಣಗೆರೆ
ಬೆಂಗಳೂರಿನ ರಾಜ್ಯ ಅಂಗವಿಕಲ ಕ್ರೀಡಾ ಸಂಸ್ಥೆ ಮತ್ತು ಕರ್ನಾಟಕ ಪ್ಯಾರಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪ್ಯಾರಾ ಬ್ಯಾಡ್ಮಿಂಟನ್ ಸಂಸ್ಥೆಯಿಂದ ಫೆ.4ರಂದು ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ, ಇಎನ್‌ಟಿ ತಜ್ಞ ಡಾ.ಶಿವಕುಮಾರ ಎಂ.ಅಂನನೂರು ತಿಳಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಂದ್ಯಾವಳಿಯಲ್ಲಿ ವಿಜೇತರಾದ ಸ್ಪರ್ಧಿಗಳ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗುವುದು. ಬೆಂಗಳೂರನ್ನು ಹೊರತು ಪಡಿಸಿ ಹೊರ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಆಯೋಜಿಸಲಾಗುತ್ತಿದೆ ಎಂದರು.
ಪಂದ್ಯಾವಳಿಗೆ ಸುಮಾರು 80ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವರು. ಒಟ್ಟು 6 ವಿಭಾಗಗಳಲ್ಲಿ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆ ನಡೆಯುತ್ತವೆ. ಆರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಸ್ಪರ್ಧಿಗಳಿಗೆ ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಭೋಜನ, ಸಂಜೆ ಲಘು ಉಪಹಾರದ ವ್ಯವಸ್ಥೆ ಇದೆ. ಪಂದ್ಯಾವಳಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡುವರು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಹೇಳಿದರು.ಸಂಸ್ಥೆಯ ಉಪಾಧ್ಯಕ್ಷರಾದ ಇ.ದೇವೇಂದ್ರಪ್ಪ, ಎಂ.ಮಣಿವಾಸಗಮ್, ಪ್ರಧಾನ ಕಾರ್ಯದರ್ಶಿ ಜೆ.ಬಿ.ಉಮೇಶ, ನಿರ್ದೇಶಕ ಬಿ. ತಿಪ್ಪೇಶ ಇತರರಿದ್ದರು.