ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ

| Published : Oct 23 2024, 12:38 AM IST

ಸಾರಾಂಶ

ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಮೇಕೆದಾಟು ಯೋಜನೆ ಪ್ರಾರಂಭ ತಾಂತ್ರಿಕ ಸಮಸ್ಯೆ ಎಂಬಂತೆ ಉಳಿದಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮತ್ತು ರೈತ ಮುಖಂಡರು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿದರು.ಕರ್ನಾಟಕದಲ್ಲಿ ಚುನಾವಣೆ ಪೂರ್ವದಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆ ಪ್ರಾರಂಭಕ್ಕೆ ಸಾಕಷ್ಟು ಒತ್ತಡ ಹಾಕಿದ್ದೀರಾ, ಆದರೆ, ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಮೇಕೆದಾಟು ಯೋಜನೆ ಪ್ರಾರಂಭ ತಾಂತ್ರಿಕ ಸಮಸ್ಯೆ ಎಂಬಂತೆ ಉಳಿದಿದೆ. ರಾಜ್ಯದ ಎಲ್ಲಾ ಸಂಸತ್ ಸದಸ್ಯರನ್ನು ಒಟ್ಟುಗೂಡಿಸಿ ಮೇಕೆದಾಟು ಜಲಾಶಯ ಯೋಜನೆ ಆರಂಭಿಸಲು ಕೇಂದ್ರ ಸರ್ಕಾರದಿಂದ ಸಹಕಾರವನ್ನು ಪಡೆಯಬೇಕು ಎಂದು ಅವರು ಆಗ್ರಹಿಸಿದರು.ಈ ವೇಳೆ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಮುಖಂಡರಾದ ನಾಗರಾಜ್, ಶಿವರುದ್ರಪ್ಪ, ಹೊಸಪುರ ಮಾದಪ್ಪ, ಮಲೆಯೂರು ಪ್ರವೀಣ್, ಅಂಬಳೆ ಮಹದೇವಸ್ವಾಮಿ, ಅರಳಿಕಟ್ಟೆ ಕುಮಾರ್, ವಳಗೆರೆ ಗಣೇಶ್ ಇದ್ದರು.