ತವರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅದ್ಧೂರಿ ಸ್ವಾಗತ

| Published : Nov 30 2023, 01:15 AM IST

ತವರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅದ್ಧೂರಿ ಸ್ವಾಗತ
Share this Article
  • FB
  • TW
  • Linkdin
  • Email

ಸಾರಾಂಶ

ಈಶ್ವರಪ್ಪ- ಸಂಘ ಪ್ರಮುಖರ ಮನೆಗೆ ಭೇಟಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ತವರು ಜಿಲ್ಲೆಗೆ ಆಗಮಿಸುತ್ತಿದ್ದಂತೆ ಮತ್ತೂರು ಗ್ರಾಮಕ್ಕೆ ತೆರಳಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹಕ ಪಟ್ಟಾಭಿರಾಮ್ ಹಾಗೂ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು. ಬಳಿಕ ಶಿವಮೊಗ್ಗ ನಗರದ ಗುಂಡಪ್ಪ ಶೆಡ್‌ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈ. ನಿವಾಸಕ್ಕೆ ಭೇಟಿ ನೀಡಿ, ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದುಕೊಂಡರು. ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರಿಗೆ ಶಾಲು ಹೊದಿಸಿ, ಬಿ.ವೈ.ವಿಜಯೇಂದ್ರ ಅವರು ಸನ್ಮಾನ ಮಾಡಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಶುಭ ಕೋರಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಜಯಘೋಷ ಕೂಗಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಬಿ.ವೈ.ವಿಜಯೇಂದ್ರ ಅವರನ್ನು ಬುಧವಾರ ಜಿಲ್ಲಾ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ಕೋರಿದರು.

ವಿಜಯೇಂದ್ರ ಆಗಮನ ಹಿನ್ನೆಲೆಯಲ್ಲಿ ಇಡೀ ನಗರದಲ್ಲಿ ಹಬ್ಬದ ವಾತಾವರಣ ಉಂಟಾಗಿತ್ತು. ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ಎಲ್ಲೆಡೆ ಕಟೌಟ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕಿ ಸ್ವಾಗತ ಕೋರಿದರು.

ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರ ಬಿಜೆಪಿ ನಾಯಕರು, ಪ್ರಧಾನಿಯವರ ಕಟೌಟ್‌ಗಳು ಕೂಡ ನಗರದಲ್ಲಿ ರಾರಾಜಿಸಿದವು. ಬೆಳಗಿನ ಜಾವ ರೈಲಿನಲ್ಲಿ ಬಂದ ಅವರನ್ನು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿದರು. ಈ ಸಂದರ್ಭ ಅವರಿಗೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಚಂಡೆ ತಂಡ ಇತ್ತು. ನೂತನ ರಾಜ್ಯಾಧ್ಯಕ್ಷರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಕಾರ್ಯಕರ್ತರು ಘೋಷಣೆ ಕೂಗಿದರು. ವಿಜಯೇಂದ್ರಗೆ ಆರತಿ ಬೆಳಗಿ ಬಿಜೆಪಿ ಕಚೇರಿಯೊಳಗೆ ಸ್ವಾಗತಿಸಲಾಯಿತು. ಬಿಜೆಪಿ ಕಚೇರಿಯನ್ನು ಚಪ್ಪರ, ತಳಿರು-ತೋರಣದಿಂದ ಅಲಂಕರಿಸಲಾಗಿತ್ತು.

ಎಲ್ಲ ಅಭ್ಯರ್ಥಿಗಳ ಗೆಲ್ಲಿಸಬೇಕು- ವಿಜಯೇಂದ್ರ:

ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಇರೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮಿಸೋಣ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಅಭ್ಯರ್ಥಿಗಳು ಗೆಲ್ಲಬೇಕು ಎಂದು ತಿಳಿಸಿದರು.

ಈ ಸಂದರ್ಭ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್. ಅರುಣ್‌, ಪ್ರಮುಖರಾದ ಗಿರೀಶ್‌ ಪಟೇಲ್‌ ಸೇರಿದಂತೆ ಹಲವರು ಇದ್ದರು.

ಈಶ್ವರಪ್ಪ- ಸಂಘ ಪ್ರಮುಖರ ಮನೆಗೆ ಭೇಟಿ:

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ತವರು ಜಿಲ್ಲೆಗೆ ಆಗಮಿಸುತ್ತಿದ್ದಂತೆ ಮತ್ತೂರು ಗ್ರಾಮಕ್ಕೆ ತೆರಳಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹಕ ಪಟ್ಟಾಭಿರಾಮ್ ಹಾಗೂ ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಂ.ಬಿ. ಭಾನುಪ್ರಕಾಶ್ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು.

ಬಳಿಕ ಶಿವಮೊಗ್ಗ ನಗರದ ಗುಂಡಪ್ಪ ಶೆಡ್‌ನಲ್ಲಿರುವ ಮಾಜಿ ಸಚಿವ ಕೆ.ಎಸ್.ಈ. ನಿವಾಸಕ್ಕೆ ಭೇಟಿ ನೀಡಿ, ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದುಕೊಂಡರು. ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರಿಗೆ ಶಾಲು ಹೊದಿಸಿ, ಬಿ.ವೈ.ವಿಜಯೇಂದ್ರ ಅವರು ಸನ್ಮಾನ ಮಾಡಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಶುಭ ಕೋರಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಜಯಘೋಷ ಕೂಗಿದರು.

ಅದ್ಧೂರಿ ಮೆರವಣಿಗೆ:

ಬೆಕ್ಕಿನ ಕಲ್ಮಠದಲ್ಲಿ ಶ್ರೀಗಳ ಆಶೀರ್ವಾದ ಪಡೆದ ನಂತರ ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಬೈಕ್, ಕಾರ್ ರ್ಯಾಲಿಯೊಂದಿಗೆ ಪೆಸಿಟ್ ಕಾಲೇಜಿಗೆ ಕರೆತರಲಾಯಿತು. ಬೆಕ್ಕಿನ ಕಲ್ಮಠ ಬಳಿ ಜೆಸಿಬಿ ಮೂಲಕ ಬೃಹತ್ ಸೇಬಿನ ಹಾರ ಹಾಕಲಾಯಿತು. ಪೆಸಿಟ್ ಕಾಲೇಜಿನ ಸಭಾಂಗಣಕ್ಕೆ ಬರುತ್ತಿದ್ದಂತೆ ಮಂಗಳವಾದ್ಯ ಮೊಳಗಿಸಲಾಯಿತು. ಈ ಸಂದರ್ಭ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತ್ತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ನಗರದ ಬೆಕ್ಕಿನ ಕಲ್ಮಠದಿಂದ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯಲ್ಲಿ ಬೈಕ್‌ಗಳು ಜಾಥಾದಲ್ಲಿ ಭಾಗವಹಿಸಿದ್ದವು. ಆರಂಭದಲ್ಲಿ ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಬೃಹತ್ ಹಾರ ಹಾಕಲಾಯಿತು. ನಗರದ ಪ್ರಮುಖ ರಸ್ತೆಗಳ ಮೂಲಕ ಪಿಇಎಸ್ ಕಾಲೇಜು ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯ ಡಿ.ಎಸ್. ಅರುಣ್, ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಸೇರಿದಂತೆ ಹಲವರು ಜಾಥಾದಲ್ಲಿ ಭಾಗವಹಿಸಿದ್ದರು.

ಬೆಕ್ಕಿನ ಕಲ್ಮಠದಿಂದ ಅಮ್ಮಿರ್‌ ಅಹಮ್ಮದ್ ವೃತ್ತ, ಗೋಪಿವೃತ್ತ, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ವೃತ್ತ ಮಾರ್ಗವಾಗಿ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದವರೆಗೆ ಮೆರವಣಿಗೆ ನಡೆಯಿತು.

- - - -29ಎಸ್‌ಎಂಜಿಕೆಪಿ06:

ಶಿವಮೊಗ್ಗಕ್ಕೆ ಬುಧವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಗರದ ಬೆಕ್ಕಿನಕಲ್ಮಠದಿಂದ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಡಿ.ಎಸ್.ಅರುಣ್, ಗುರುಮೂರ್ತಿ ಇತರರು ಇದ್ದರು.

- - --29ಎಸ್‌ಎಂಜಿಕೆಪಿ07:

ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಿಂದ ತೆರೆದ ವಾಹನದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಮೆರವಣಿಗೆಯಲ್ಲಿ ಅಪಾರ ಸಂಖ್ಯೆ ಕಾರ್ಯಕರ್ತರು ಬೈಕ್‌ಗಳಲ್ಲಿ ಭಾಗವಹಿಸಿದರು.