ಸಾರಾಂಶ
- 15ರಿಂದ 17ರ ವಯೋಮಾನದ ಬಾಲಕ-ಬಾಲಕಿಯರು ಭಾಗಿ - 19ರಿಂದ 24ರವರೆಗೆ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜನೆ
- - - ಕನ್ನಡಪ್ರಭ ವಾರ್ತೆ, ದಾವಣಗೆರೆದಾವಣಗೆರೆ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯಿಂದ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಮೇ 19ರಿಂದ 24ರವರೆಗೆ 15ರಿಂದ 17 ವರ್ಷದ ಒಳಗಿನ ಬಾಲಕ- ಬಾಲಕಿಯರ ಕರ್ನಾಟಕ ರಾಜ್ಯ ರ್‍ಯಾಂಕಿಂಗ್ ಬ್ಯಾಂಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಎಸ್.ಎನ್. ಬಸವರಾಜ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಟ್ಟು 1050 ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸ್ಪರ್ಧಿಗಳು ಹಾಗೂ ಜೊತೆಗೆ ಬರುವ ಪಾಲಕರಿಗೆ ಬೆಳಗ್ಗೆ ಉಪಹಾರ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆಯನ್ನು ಸಂಸ್ಥೆಯಿಂದ ಮಾಡಲಾಗಿದೆ ಎಂದರು.ಪಂದ್ಯಾವಳಿಗೆ ಮೇ 19ರ ಬೆಳಗ್ಗೆ 11.30ಕ್ಕೆ ಎಸ್.ಎನ್. ಬಸವರಾಜ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಪಂದ್ಯಾವಳಿಗೆ ಚಾಲನೆ ನೀಡುವರು. ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಕ್ರೀಡಾ ಧ್ವಜಾರೋಹಣ ಮಾಡುವರು. ಎಎಸ್‌ಪಿ ಎಂ.ಎಸ್.ವಿಜಯಕುಮಾರ, ಪಾಲಿಕೆ ಆಯುಕ್ತೆ ರೇಣುಕಾ, ಬಿಐಇಟಿ ಕಾಲೇಜು ಪ್ರಾಚಾರ್ಯ ಡಾ. ಎಚ್.ಬಿ. ಅರವಿಂದ, ಜಿಲ್ಲಾ ಉದ್ಯೋಗಾಧಿಕಾರಿ ವಿಜಯಲಕ್ಷ್ಮೀ, ಸಂಸ್ಥೆ ಗೌರವಾಧ್ಯಕ್ಷ ಬಿ.ವಿ. ಶ್ರೀನಿವಾಸ ಶಿವಗಂಗಾ, ಮಹೇಶ ಆರ್. ಶೆಟ್ಟಿ ಇತರರು ಭಾಗವಹಿಸುವರು ಎಂದು ಹೇಳಿದರು.
ಸಂಸ್ಥೆಯ ಡಿ.ಆರ್. ಗಿರಿರಾಜ, ಕೆ.ಎಚ್. ಸಿದ್ದೇಶ್ವರ, ಶಶಿಧರ ಇತರರು ಇದ್ದರು.- - - -17ಕೆಡಿವಿಜಿ2:
ದಾವಣಗೆರೆಯಲ್ಲಿ ಶುಕ್ರವಾರ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಎಸ್.ಎನ್. ಬಸವರಾಜ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.