ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

| Published : Dec 14 2024, 12:47 AM IST

ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಪಿಎಫ್ ಸೌಲಭ್ಯ ಜಮೆಯಾಗುತ್ತಿದೆಯೇ ಎಂದು ಮಹಿಳಾ ಕಾರ್ಮಿಕರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಬಳ್ಳಾರಿ: ನಗರದ ಹೊರ ವಲಯದಲ್ಲಿರುವ ಫೋಲಾಕ್ಸ್‌ ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.ನಿಗದಿತ ವೇಳೆಗೆ ವೇತನ, ಪಿಎಫ್ ಸೌಲಭ್ಯ ಜಮೆಯಾಗುತ್ತಿದೆಯೇ ಎಂದು ಮಹಿಳಾ ಕಾರ್ಮಿಕರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.ಮಹಿಳಾ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಕನಿಷ್ಠ ಮೂಲಸೌಕರ್ಯ ಒದಗಿಸಬೇಕು. ಸಕಾಲದಲ್ಲಿ ಅವರಿಗೆ ವೇತನ ಮತ್ತು ಪಿಎಫ್ ಪಾವತಿಸಬೇಕು ಎಂದು ಕಾರ್ಖಾನೆಯ ಮಾಲೀಕರಿಗೆ ಸೂಚಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾಂತೇಶ, ಪೋಲ್ಯಾಕ್ಸ್‌ ಜೀನ್ಸ್‌ ಕಾರ್ಖಾನೆಯ ಮಾಲೀಕ ಮಲ್ಲಿಕಾರ್ಜುನ, ಮಹಿಳಾ ಕಾರ್ಮಿಕರು ಹಾಗೂ ಇತರರು ಇದ್ದರು.

ಬಳ್ಳಾರಿಯ ಪೋಲಾಕ್ಸ್‌ ಜೀನ್ಸ್ ಗಾರ್ಮೆಂಟ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಶುಕ್ರವಾರ ಭೇಟಿ ನೀಡಿ ಅಲ್ಲಿನ ಮಹಿಳಾ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.