ದೇಶದ ಸಂವಿಧಾನ ಬದಲಿಸುವ ಕುರಿತು ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನದಲ್ಲಿ ಯಾವುದೇ ದೋಷ ಇಲ್ಲದ ಕಾರಣ ಬದಲಾವಣೆ ಮಾಡುವುದು ಸರಿಯಲ್ಲ. ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು ಎಲ್ಲ ಕ್ಷೇತ್ರಗಳನ್ನು ಪ್ರವೇಶಿಸಲು ಸಂವಿಧಾನವೇ ಕಾರಣ.

ಹುಬ್ಬಳ್ಳಿ:

ಭಾರತ ಸಂವಿಧಾನ ರಚನೆಯ ಸ್ವರೂಪವೇ ಎಲ್ಲರನ್ನೂ ಒಳ್ಳಗೊಳ್ಳುವ ಮೌಲ್ಯ ಆಧರಿಸಿದೆ. ಇದು ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಒಂದಾಗಿದ್ದು ಸಂವಿಧಾನ ಜನರ ಆಚಾರ, ವಿಚಾರ, ಸಂಸ್ಕೃತಿ ಅಡ್ಡಿಪಡಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅಭಿಪ್ರಾಯಪಟ್ಟರು.

ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಬಚಾವ್ ದಿವಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ದೇಶದ ಸಂವಿಧಾನ ಬದಲಿಸುವ ಕುರಿತು ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಸಂವಿಧಾನದಲ್ಲಿ ಯಾವುದೇ ದೋಷ ಇಲ್ಲದ ಕಾರಣ ಬದಲಾವಣೆ ಮಾಡುವುದು ಸರಿಯಲ್ಲ. ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು ಎಲ್ಲ ಕ್ಷೇತ್ರಗಳನ್ನು ಪ್ರವೇಶಿಸಲು ಸಂವಿಧಾನವೇ ಕಾರಣ. ದಲಿತ ಮಹಿಳೆ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದಾರೆ. ಕಾರಣ ಸಂವಿಧಾನ ತೋರಿದ ಮಾರ್ಗದಲ್ಲಿ ನಾವು ಸಾಗಬೇಕು ಎಂದರು.

ಮಾಜಿ ಸಚಿವ ಎಂ. ಹಿಂಡಸಗೇರಿ, ವಿಪ‌ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಪ್ ಹಳ್ಳೂರು, ಮಾಜಿ ಜಿಲ್ಲಾ ಅಧ್ಯಕ್ಷರು, ಮಾಜಿ ಸಂಸದರು, ವಿವಿಧ ನಿಗಮಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸರ್ಕಾರದ ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.