ಆ.29ಕ್ಕೆ ಸಿಎಂ ಪರ ರಾಜ್ಯಾದ್ಯಂತ ಡಿಎಸ್‌ಎಸ್‌ ಹೋರಾಟ

| Published : Aug 27 2024, 01:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ 40ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದವರು ಮುಖ್ಯಮಂತ್ರಿ ಸಿದ್ಧರಾಮಯ್ಯ. ಅವರ ವಿರುದ್ದ ಸುಳ್ಳು ಆರೋಪ ಹೊರೆಸಿರುವ ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರ ಹಾಗೂ ಕೇಂದ್ರದ ಕೈಗೊಂಬೆಯಾಗಿರುವ ರಾಜ್ಯಪಾಲರ ನಡೆ ಖಂಡಿಸಿ ಆ.29ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

40ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದವರು ಮುಖ್ಯಮಂತ್ರಿ ಸಿದ್ಧರಾಮಯ್ಯ. ಅವರ ವಿರುದ್ದ ಸುಳ್ಳು ಆರೋಪ ಹೊರೆಸಿರುವ ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರ ಹಾಗೂ ಕೇಂದ್ರದ ಕೈಗೊಂಬೆಯಾಗಿರುವ ರಾಜ್ಯಪಾಲರ ನಡೆ ಖಂಡಿಸಿ ಆ.29ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಿ.ಜಿ.ಸಾಗರ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳಿನ ಸರಮಾಲೆ ಬಿತ್ತಿ ಅಸ್ಥಿರತೆ ಉಂಟು ಮಾಡಲಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಅವರ ಸಂಬಂಧಿಕರು ಭಾಗಿಯಾಗಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಪಕ್ಷಗಳು ಸುಳ್ಳುಸುದ್ದಿ ಹರಡುತ್ತಿದ್ದಾರೆ. ಈ ಮೂಲಕ ಕುತಂತ್ರಿಗಳು ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡುತ್ತಿದ್ದಾರೆ. ಮುಡಾ ಪ್ರಕರಣದ ವಿಚಾರದಲ್ಲಿ ರಾಜ್ಯಪಾಲರು ಸಹ ಪರಿಸ್ಥಿತಿಯನ್ನು ನಿಭಾಯಿಸುತ್ತಿಲ್ಲ. ರಾಜ್ಯಪಾಲರನ್ನು ಕೇಂದ್ರದವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರನ್ನು ಪಾಪಸ್ಸು ಕರೆಸಿಕೊಳ್ಳಬೇಕು ಎಂದು ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಲಾಗುತ್ತದೆ ಎಂದು ಹೇಳಿದರು.ಬಿಜೆಪಿ-ಜೆಡಿಎಸ್ ಮತ್ತು ರಾಜ್ಯಪಾಲರ ಷಡ್ಯಂತ್ರ ಖಂಡಿಸಿ ಆ.29ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸುತ್ತಿದೆ. ಈ ಪ್ರತಿಭಟನೆಯಲ್ಲಿ ಹಿಂದುಳಿದ ವರ್ಗಗಳು, ಪ್ರಗತಿಪರರು, ಸಿದ್ಧರಾಮಯ್ಯನವರ ಅಭಿಮಾನಿಗಳು, ನಾಡಿನ ನಾಗರಿಕರು ಹೋರಾಟದಲ್ಲಿ ಭಾಗವಹಿಸಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಸಿದ್ದು ರಾಯಣ್ಣವರ, ವೈ.ಸಿ.ಮಯೂರ, ಎಸ್.ಪಿ.ಸುಳ್ಳದ, ರಮೇಶ ಧರಣಾಕರ ಉಪಸ್ಥಿತರಿದ್ದರು.