ನಾಳೆಯಿಂದ ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಧರಣಿ

| Published : Oct 03 2024, 01:20 AM IST

ನಾಳೆಯಿಂದ ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ರಾಜ್ಯಾದ್ಯಂತ ಗ್ರಾಪಂ ಸೇವೆಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಪಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಸ್.ಎಫ್. ಮಾಳವಾಡ ತಿಳಿಸಿದರು.

ಲಕ್ಷ್ಮೇಶ್ವರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ರಾಜ್ಯಾದ್ಯಂತ ಗ್ರಾಪಂ ಸೇವೆಗಳನ್ನು (ಕುಡಿಯುವ ನೀರು, ಬೀದಿದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಪಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಎಸ್.ಎಫ್. ಮಾಳವಾಡ ತಿಳಿಸಿದರು.

ಮಂಗಳವಾರ ತಾಪಂ ಇಒ ಕೃಷ್ಣಪ್ಪ ಧರ್ಮರ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಮತ್ತು ಗ್ರಾಪಂ ಸದಸ್ಯರ ಒಕ್ಕೂಟದ ವತಿಯಿಂದ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.

ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಪಂ ನೌಕರರು, ಪಿಡಿಒ, ಕರ ವಸೂಲಿಗಾರರು, ಡಿಇಒ, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆ ಪರಿಹರಿಸುವಂತೆ ರಾಜ್ಯ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸಿದರೂ ಪ್ರಯೋಜನವಿಲ್ಲ ಎಂದು ದೂರಿದರು. ರಾಜ್ಯದಲ್ಲಿ ಶೇ. 70ರಷ್ಟು ಜನ ಸಮೂಹಕ್ಕೆ ಸೇವೆ ಒದಗಿಸುತ್ತಿದ್ದೇವೆ. ಎಲ್ಲ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನೌಕರರು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆ ಧೋರಣೆಯನ್ನು ಖಂಡಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ. 4ರಿಂದ ಅನಿರ್ದಿಷ್ಟಾವಧಿ ಹೋರಾಟ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮಂಜುನಾಥ ಮಲ್ಲೂರ, ಬಿ.ಬಿ. ತಳವಾರ, ಕೆ.ಸಿ. ಕಡೂರ, ರವಿ ಕೊರಕನವರ, ರಾಮಯ್ಯ ಗುರುವಿನ, ಶ್ರೀಕಾಂತ ಬಾಲೇಹೊಸೂರ, ಕವಿತಾ ಅಣ್ಣಿಗೇರಿ, ಮಹೇಶ ಮೂಲಿಮನಿ, ರಾಮಪ್ಪ ಮಸೂತಿ, ಬಸವರಾಜ ಅರ್ಕಸಾಲಿ, ಫಕೀರೇಶ, ನಿಂಗನಗೌಡ ಬಾಗವಾಡ ಹಾಗೂ ವಿವಿಧ ವೃಂದದ ಗ್ರಾಪಂ ನೌಕರರು ಹಾಜರಿದ್ದರು.