ಸಾರಾಂಶ
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಡಿ.31ರ ಬೆಳಗ್ಗೆ 6 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ
ವಿಜಯಪುರ : ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಡಿ.31ರ ಬೆಳಗ್ಗೆ 6 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಿ ಬೆಂಬಲಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಚ್.ಅಗರಖೇಡ ಹೇಳಿದರು.
ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾಲ್ಕೂ ಸಾರಿಗೆ ನಿಗಮಗಳ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ ದೋರಣೆ ತಳೆದಿದೆ ಎಂದರು.ಪ್ರ.ಕಾರ್ಯದರ್ಶಿ ಐ.ಐ.ಮುಶ್ರೀಫ್ ಮಾತನಾಡಿ, ಜನವರಿ 25 ರಂದು, ಆಗಸ್ಟ್ 13 ರಂದು, ಆಗಸ್ಟ್ 28 ರಂದು, ಸೆಪ್ಟೆಂಬರ್ 12ರಂದು ಸೇರಿದಂತೆ ಹಲವುಬಾರಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಇತ್ಯರ್ಥಪಡಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಸರ್ಕಾರದಿಂದ ಸೂಕ್ತ ಭರವಸೆ ಸಿಗದ ಹಿನ್ನೆಲೆ ನಾಲ್ಕೂ ಸಾರಿಗೆ ನಿಗಮಗಳ ಎಲ್ಲ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಡಿ.31 ರಿಂದ ಬೆಳಗ್ಗೆ 6 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.ಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರುಗಳಾದ ಜಿ.ಎಂ.ಬಿರಾದಾರ, ರಮೇಶ ಮಡ್ಡಿಮನಿ, ಮೋಹನ ಗುನ್ನಾಪೂರ, ಯುವರಾಜ ಪರ್ನಾಕರ, ಈರಣ್ಣ ತೊಂಡಿಕಟ್ಟಿ ಹೆಚ್.ಬಿ.ಬಬಲೇಶ್ವರ, ಎಂ.ಎನ್.ನದಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.