ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ ಸಂಪೂರ್ಣ ಮಾಹಿತಿ ನೀಡುವಂತೆ ಕಾಫಿ ಬೆಳೆಗಾರರಿಗೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುತ್ತ ಮುತ್ತಲಿನ ಕಾಫಿ ತೋಟಗಳಿಗೆ ಹೊರ ರಾಜ್ಯಗಳಿಂದ ಆಗಮಿಸಿರುವ ಕೂಲಿ ಕಾರ್ಮಿಕರನ್ನು ತೋಟದ ಲೈನ್‌ಮನೆಗಳಲ್ಲಿ ಇರಿಸಿಕೊಂಡಿದ್ದಲ್ಲಿ ಸಂಪೂರ್ಣ ಮಾಹಿತಿ ನೀಡುವಂತೆ ಕಾಫಿ ಬೆಳೆಗಾರರಿಗೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಸೂಚಿಸಿದ್ದಾರೆ.ಶನಿವಾರ ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ತೋಟಗಳ ಮಾಲೀಕರು ಹಾಗೂ ವ್ಯವಸ್ಥಾಪಕರೊಂದಿಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಅಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.ಹೊರ ರಾಜ್ಯಗಳಿಂದ ಆಗಮಿಸಿ ಕೂಲಿ ಕೆಲಸಕ್ಕೆ ಆಗಮಿಸಿ ನೆಲೆಸಿರುವ ಕಾರ್ಮಿಕರ ಸಂಪೂರ್ಣ ಮಾಹಿತಿಯ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ಒದಗಿಸುವಂತೆ ಸೂಚಿಸಿದರಲ್ಲದೆ. ಅವರ ಹೆಚ್ಚಿನ ನಿಗಾ ಇರಿಸುವಂತೆ, ಅವರ ನಡವಳಿಕೆಗಳಲ್ಲಿ ಸಂಶಯಗಳು ಮೂಡಿಬಂದಲ್ಲಿ ಕೂಡಲೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.