ಕನ್ನಡಪ್ರಭ ವಾರ್ತೆ ಬೆಳಗಾವಿ

ಸರ್ಕಾರಿ ಇಲಾಖೆಯ ಯೋಜನೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಮಾಡಿ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ನಕಾರಾತ್ಮಕ ಜನರು ಹಾಗೂ ವಿಚಾರಗಳಿಂದ ದೂರ ಇದ್ದು ತಮ್ಮ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಯಮಕನಮರಡಿ ಶೂನ್ಯ ಸಂಪಾದನಾ ಪೀಠದ ಸಿದ್ದಬಸವ ದೇವರು ಕಿವಿಮಾತು ಹೇಳಿದರು.ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕಾ ಪಂಚಾಯತ್ ಹುಕ್ಕೇರಿ ಹಾಗೂ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಭಾನುವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸ್ವ ಸಹಾಯ ಸಂಘಗಳ ಸದಸ್ಯರು ಉತ್ಪಾದಿಸಿದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬೆಳಗಾವಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ರವೀಂದ್ರ ಬಂಗಾರಪ್ಪನವರ್ ಬೆಳಗಾವಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಭಾಗ್ಯಶ್ರೀ ಜಹಾಗಿರದಾರ, ಜಿಲ್ಲಾ ಅಗ್ರಹಣಿ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ಘೋಡಕೆ, ಹುಕ್ಕೇರಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಮಲ್ಲಾಡದ, ಯಶಸ್ವಿ ಮಹಿಳಾ ಉದ್ಯಮೇದಾರರು ಶಾರವ್ವಾ ದರೋಜಿ, ಕಾಂಗ್ರೆಸ್ ಯುವ ಮುಖಂಡ ಕಿರಣ್ ರಜಪೂತ, ಎಚ್‌.ಎಸ್‌.ಕರೆಹೊನ್ನ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಯಮಕನಮರಡಿ, ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು. ಒಕ್ಕೂಟದ ಅಧ್ಯಕ್ಷರು, ಜಿಲ್ಲಾ ಯೋಜನಾ ನಿರ್ವಹಣಾ ಘಟಕದ ಸಂಜೀವಿನಿ ಜಿಲ್ಲಾ ಹಾಗೂ ಮತ್ತು ತಾಲೂಕ ಅಭಿಯಾನ ನಿರ್ವಹಣ ಘಟಕದ ಸಿಬ್ಬಂದಿ, ತಾಲೂಕಿನ ಎಲ್ಲಾ ಸಂಜೀವಿನಿ ಮಹಿಳಾ ಒಕ್ಕೂಟದ ಸಿಬ್ಬಂದಿಗಳ ಮತ್ತು SHG ಮಹಿಳೆಯರು ಉಪಸ್ಥಿತ ಭಾಗವಹಿಸಿದ್ದರು.ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಭಾಷಣವನ್ನು ಅನುರಾಧ ಕಾಪಸೆ, ಸುನೀತಾ ಚಿಕೋರ್ಡೇ ಇವರು ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದ ವಿಷಯದ ಕುರಿತು ಯೋಜನಾ ನಿರ್ದೇಶಕ ರವೀಂದ್ರ ಬಂಗಾರಪ್ಪ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ಉದ್ಯೋಗ ಕೈಗೊಳ್ಳಲು ಉದ್ಯಮಿದಾರರಿಗೆ ತಾಲೂಕಿನ ಸುಮಾರು 50 ಸ್ವ ಸಹಾಯ ಸಂಘಗಳಿಗೆ ₹ 1.50 ಕೋಟಿ ಬ್ಯಾಂಕ್ ಸಾಲ ಮಂಜೂರಾತಿ ಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಮಹಿಳಾ ಒಕ್ಕೂಟ ಮತ್ತು ಅತ್ಯುತ್ತಮ ಮಹಿಳಾ ಸ್ವ ಸಹಾಯ ಸಂಘಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.