ಸಾರಾಂಶ
ಹೊಸದುರ್ಗದ ತಾಲೂಕು ಅರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯೆ ಡಾ.ಸ್ವಾತಿ ಪ್ರದೀಪ್ ಕ್ಷಯರೋಗಿಗಳಿಗೆ ಫುಡ್ ಕಿಟ್‌ಗಳನ್ನು ವಿತರಿಸಿದರು.
ಕ್ಷಯರೋಗಿಗಳಿಗೆ ಫುಡ್ ಕಿಟ್ ವಿತರಿಸಿ ಡಾ.ಸ್ವಾತಿ ಸಲಹೆಕನ್ನಡಪ್ರಭ ವಾರ್ತೆ ಹೊಸದುರ್ಗ
ರಾಸಾಯನಿಕ ಮುಕ್ತ ಆರೋಗ್ಯಕರವಾದ ಸಾವಯವ ಆಹಾರವನ್ನು ಬಳಸಿ ಆರೋಗ್ಯ ಕಾಪಾಡಿಕೊಂಡು ನೆಮ್ಮದಿಯ ಜೀವನ ಕಂಡುಕೊಳ್ಳುವುದರಿಂದ ಕುಟುಂಬ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಪುರಸಭಾ ಸದಸ್ಯೆ ಡಾ.ಸ್ವಾತಿ ಪ್ರದೀಪ್ ಹೇಳಿದರು.ನಗರದ ತಾಲೂಕು ಅರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸದ್ಗುರು ಆಯುರ್ವೇದ ಸಂಸ್ಥೆಯಿಂದ ಕ್ಷಯರೋಗಿಗಳಿಗೆ ನಿಕ್ಷಯ್ ಮಿತ್ರ ಕಾರ್ಯಕ್ರಮದಡಿಯಲ್ಲಿ ಫುಡ್ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾವಯವ ಕೃಷಿಯಿಂದ ಬೆಳೆದ ಆಹಾರ ಮರೀಚಿಕೆಯಾಗಿದೆ. ಮಾನವ ತನ್ನ ದೈನಂದಿನ ಬದುಕಿನ ಒತ್ತಡದಲ್ಲಿ ತನ್ನ ಆರೋಗ್ಯ ಕಾಪಾಡಿಕೊಳ್ಳುವುದನ್ನು ಮರೆತಿದ್ದಾನೆ. ಕೇವಲ ಕೆಮ್ಮು-ನೆಗಡಿ ಎಂದು ಉದಾಸೀನ ಮಾಡಿ ಚಿಕಿತ್ಸೆ ಪಡೆದುಕೊಳ್ಳದೆ ಮುಂದೊಂದು ದಿನ ಅದು ಕ್ಷಯ ರೋಗವಾಗಿ ಮಾರ್ಪಟ್ಟು ಆರೋಗ್ಯವನ್ನು ಕಳೆದುಕೊಳ್ಳುವ ಬದಲು ಬೇಗನೇ ಚಿಕಿತ್ಸೆಯನ್ನು ಪಡೆದುಕೊಳ್ಳುವುದರಿಂದ ಕ್ಷಯ ರೋಗವನ್ನು ಗುಣಪಡಿಸಿಕೊಳ್ಳಬಹುದು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ರಾಘವೇಂದ್ರ ಪ್ರಸಾದ್, ತಾಲೂಕಿನ ಎಲ್ಲ ವೈದ್ಯಧಿಕಾರಿಗಳು, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ವೀರೇಂದ್ರ ಪಟೇಲ್, ಹನುಮಂತರೆಡ್ಡಿ, ರಮೇಶ್, ಅರೋಗ್ಯ ನಿರೀಕ್ಷಣಾ ಧಿಕಾರಿಗಳು, ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಅರೋಗ್ಯಧಿಕಾರಿಗಳು ಹಾಗೂ ಅರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಭಾಗವಹಿಸಿದ್ದರು.