ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್: ಯಶ್ ಪಾಲ್ ಸುವರ್ಣ

| Published : Mar 07 2025, 11:48 PM IST

ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್: ಯಶ್ ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಕರಾವಳಿ ಜಿಲ್ಲೆಯ ಮೀನುಗಾರಿಕೆ ಹಾಗೂ ಬಂದರು ಅಭಿವೃದ್ಧಿಗೆ ಯಾವುದೇ ಅನುದಾನ ಒದಗಿಸಿಲ್ಲ, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಬ್ರಹ್ಮಾವರ ಕೃಷಿ ಕಾಲೇಜು ಘೋಷಣೆಯ ಭರವಸೆ ಈಡೇರಿಲ್ಲ.

ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಗೆ ಅಗತ್ಯ ಅನುದಾನ, ಪ್ರಾಕೃತಿಕ ವಿಕೋಪ ಪರಿಹಾರ ಮೊತ್ತ ಏರಿಕೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವೃಧ್ದಿ ನಿಗಮಕ್ಕೆ ಅನುದಾನದ ಬಗ್ಗೆ ಯಾವುದೇ ಘೋಷಣೆ ಮಾಡದೇ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಬಗ್ಗೆ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ ಎಂದವರು ನಿರಾಸೆ ವ್ಯಕ್ತಪಡಿಸಿದ್ದಾರೆ.ಸಾಲದ ಶೂಲಕ್ಕೆ ದೂಡಲಿರುವ ಸಿದ್ದು ಬಜೆಟ್‌: ಸುನಿಲ್‌ ಕಿಡಿಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿರುವ ಬಜೆಟ್ ಬಗ್ಗೆ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ರಾಜ್ಯವನ್ನು 1,16000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯ 16ನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಃಸ್ಥಿತಿಗೆ ದೂಡಲಿದೆ. ಪ್ರತಿ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ದೂರುವುದನ್ನೇ ಅಭ್ಯಾಸ ಮಾಡಿಕೊಂಡಿರುವ ಸಿದ್ದರಾಮಯ್ಯ ಬಜೆಟ್ ನಲ್ಲಿ 67,877 ಕೋಟಿ ರೂ. ಕೇಂದ್ರದ ಸ್ವೀಕೃತಿಯನ್ನು ತೋರಿಸಿರುವುದು ಗಮನಾರ್ಹ ಅಂಶ ಎಂದಿದ್ದಾರೆ.ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ. ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ ಎಂದು ಸುನಿಲ್‌ ಟೀಕಿಸಿದ್ದಾರೆ.