ರಾಮನಗರ: ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಅವರು ವಾಸವಿದ್ದ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನಿವೇಶನಗಳು ಹಾಗೂ ಹಕ್ಕುಪತ್ರಗಳನ್ನು ನೀಡುವ ಸಂಬಂಧ ಹುಲಿಕಲ್ ಗ್ರಾಮದ ಸರ್ವೆ ನಂಬರ್ 127 ರಲ್ಲಿ 1.13 ಎಕರೆ/ಗುಂಟೆ ಜಮೀನನ್ನು ಆಶ್ರಯ ಯೋಜನೆಯಡಿ ಕಾಯ್ದಿರಿಸಲು ಮಾಗಡಿ ತಹಸೀಲ್ದಾರರು ಸಲ್ಲಿಸಿರುವ ಪ್ರಸ್ತಾವನೆಗೆ ಈಗಾಗಲೇ ಅಧಿಕೃತ ಜ್ಞಾಪನ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು
ರಾಮನಗರ: ಪರಿಸರ ರಾಯಭಾರಿ ಸಾಲುಮರದ ತಿಮ್ಮಕ್ಕ ಅವರು ವಾಸವಿದ್ದ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನಿವೇಶನಗಳು ಹಾಗೂ ಹಕ್ಕುಪತ್ರಗಳನ್ನು ನೀಡುವ ಸಂಬಂಧ ಹುಲಿಕಲ್ ಗ್ರಾಮದ ಸರ್ವೆ ನಂಬರ್ 127 ರಲ್ಲಿ 1.13 ಎಕರೆ/ಗುಂಟೆ ಜಮೀನನ್ನು ಆಶ್ರಯ ಯೋಜನೆಯಡಿ ಕಾಯ್ದಿರಿಸಲು ಮಾಗಡಿ ತಹಸೀಲ್ದಾರರು ಸಲ್ಲಿಸಿರುವ ಪ್ರಸ್ತಾವನೆಗೆ ಈಗಾಗಲೇ ಅಧಿಕೃತ ಜ್ಞಾಪನ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ-2015ರ ಅನುಷ್ಠಾನ ಸಂಬಂಧ)ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿಕಲ್ ಗ್ರಾಮದ ಸರ್ವೆ ನಂಬರ್ 127 ರಲ್ಲಿ 1.13 ಎ/ಗು ಜಮೀನನ್ನು ಆಶ್ರಯ ಯೋಜನೆಯಡಿ ಮಂಜೂರು ಮಾಡುವ ಸಮಯದಲ್ಲಿ ಹುಲಿಕಲ್ ಗ್ರಾಮದ ಪರಿಶಿಷ್ಟ ಹಾಗೂ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಈ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.ರಾಮನಗರ ತಾಲೂಕಿನ ಕುಂಭಾಪುರ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿಯವರು ವಾಸಿಸುತ್ತಿದ್ದಾರೆ. ಅಲ್ಲಿ 2026-27ನೇ ಸಾಲಿನ ತಾಲೂಕು ಪಂಚಾಯತ್ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಯುವ ಯೋಜನೆಯಲ್ಲಿ ಸಾರ್ವಜನಿಕರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಕುರಿತಂತೆ ನಡೆದ ಚರ್ಚೆಯಲ್ಲಿ ಜಿಲ್ಲೆಗೆ ಬಿಡುಗಡೆಯಾದ ಅನುದಾನ, ಫಲಾನುಭವಿಗಳ ಆಯ್ಕೆ ಹಾಗೂ ಅರ್ಹತೆ ಮಾನದಂಡಗಳ ಬಗ್ಗೆ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.ಸಭೆಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಬಿನೋಯ್, ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.18ಕೆಆರ್ ಎಂಎನ್ 7.ಜೆಪಿಜಿ
ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ-2015ರ ಅನುಷ್ಠಾನ ಸಂಬಂಧ)ಯ ಸಭೆ ನಡೆಯಿತು.-----------------------------