ಸಾರಾಂಶ
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿಗೊಳಿಸಿ ತಾಲೂಕಿನ ಜನರು ಪಡೆಯುತ್ತಿರುವ ಸೌಲಭ್ಯದ ವಿವರಗಳ ಅಂಕಿ-ಅಂಶಗಳ ಸಹಿತ ವಿವರಿಸಿದರು. ತಾಲೂಕಿನ ರೈತರಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ನೀಡುವ ಜೊತೆಗೆ ಕೆರೆಗಳ ತುಂಬಿಸಲಾಗುವುದು. ತಾಲೂಕಿನ ಜನರ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಲಾಗುವುದು.
ಕನ್ನಡಪ್ರಭ ವಾರ್ತೆ ಚನ್ನಗಿರಿ
ತಾಲೂಕಿನ ಜನರಿಗೆ ವಿದ್ಯುತ್ ಸಮಸ್ಯೆ ಆಗದಿರಲಿ ಎಂಬ ಉದ್ದೇಶದಿಂದ ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಸ್ಥಾವರ ಸ್ಥಾಪಿಸಿ ಸ್ಥಳೀಯ ಜನತೆಗೆ ಸಹಕಾರಿಯಾಗುವಂತೆ 31ಸಾವಿರ ಕಿ.ಲೋ ವ್ಯಾಟ್ ವಿದ್ಯುತ್ ತಯಾರಿಕಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಜನತೆಗೆ ನೀಡಿದ ಆಶ್ವಾಸನೆಯಂತೆ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿಗೊಳಿಸಿ ತಾಲೂಕಿನ ಜನರು ಪಡೆಯುತ್ತಿರುವ ಸೌಲಭ್ಯದ ವಿವರಗಳ ಅಂಕಿ-ಅಂಶಗಳ ಸಹಿತ ವಿವರಿಸಿದರು. ತಾಲೂಕಿನ ರೈತರಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ನೀಡುವ ಜೊತೆಗೆ ಕೆರೆಗಳ ತುಂಬಿಸಲಾಗುವುದು. ತಾಲೂಕಿನ ಜನರ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸುವುದಾಗಿ ಹೇಳಿದರು.ರಾಷ್ಟ್ರ ಧ್ವಜಾರೋಹಣವನ್ನು ತಹಸೀಲ್ದಾರ್ ಎರ್ರಿಸ್ವಾಮಿ ನೆರವೇರಿಸಿ ಮಾತನಾಡಿ ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ವಾಗಿ ಜೀವಿಸುವಂತಹ ಹಕ್ಕನ್ನು ಪಡೆದವರಾಗಿದ್ದು ಸಂವಿಧಾನ ಎನ್ನುವುದು ದೇಶದ ಸರ್ವೋಚ್ಚ ಕಾನೂನಾಗಿದೆ ಎಂದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರ ಗೌರವಿಸಲಾಯಿತು. ಸಮಾರಂಭಕ್ಕೂ ಮುನ್ನ ಪೊಲೀಸ್, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಮುಖ್ಯ ಅತಿಥಿಗಳಾಗಿ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಬಿ.ಕೆ.ಉತ್ತಮ, ಪೊಲೀಸ್ ಉಪಾಧೀಕ್ಷಕ ಪ್ರಶಾಂತ್ ಜಿ.ಮುನ್ನೋಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಲೋಕೋಪಯೋಗಿ ಅಭಿಯಂತರ ರವಿಕುಮಾರ್, ಸಿಡಿಪಿಒ ಸದಾನಂದ್, ಜಿ.ಪಂ ಅಭಿಯಂತರ ಷಣ್ಮುಖಪ್ಪ, ವಲಯ ಅರಣ್ಯಾಧಿಕಾರಿ ಜಗದೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಧರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ, ಶಿಕ್ಷಕ ವೆಂಕಟೇಶ್, ಕ್ಷೇತ್ರ ಸಮನ್ವಯಾಧಿಕಾರಿ ಡಾ.ಎಸ್.ಶಂಕರಪ್ಪ, ಸೇರಿ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.