ಚಿಕ್ಕಮಗಳೂರುಚಿಕ್ಕಮಗಳೂರು ಸಮೀಪದ ಎರೇಹಳ್ಳಿ ಗ್ರಾಮದಲ್ಲಿ ಹಕ್ಕುಪತ್ರ ದೊರೆಯದೆ ಹಲವು ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಲು ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳ ಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಭರವಸೆ ನೀಡಿದರು.

ಎರೇಹಳ್ಳಿ ಗ್ರಾಮದಲ್ಲಿ ನೂತನ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಚಿಕ್ಕಮಗಳೂರು ಸಮೀಪದ ಎರೇಹಳ್ಳಿ ಗ್ರಾಮದಲ್ಲಿ ಹಕ್ಕುಪತ್ರ ದೊರೆಯದೆ ಹಲವು ವಾಸಿಸುತ್ತಿರುವ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಲು ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳ ಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಭರವಸೆ ನೀಡಿದರು.ಎರೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಗುಂಡಿನಮ್ಮ ದೇವಸ್ಥಾನದ ಜಾಗ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ಅಳತೆ ಮಾಡಿಸಿ ಗಡಿ ಗುರುತಿಸುವ ಕಾರ್ಯವನ್ನೂ ಶೀಘ್ರ ಕೈಗೊಳ್ಳಲಾಗುವುದು ಎಂದರು.ಗ್ರಾಮಸ್ಥರ ಬೇಡಿಕೆಯಂತೆ ಪ್ರಸ್ತುತ ಲಭ್ಯವಿರುವ ₹೨೫ ಲಕ್ಷ ಅನುದಾನದಲ್ಲಿ ಚರಂಡಿ ಕಾಮಗಾರಿ ಬದಲಿಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಎರೇಹಳ್ಳಿಯಿಂದ ನಲ್ಲೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಈಗಾಗಲೇ ನಿರ್ಮಿಸ ಲಾಗಿದೆ. ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.ಗ್ರಾಮಸ್ಥರು ಹಾಗೂ ಶಾಸಕರ ಅನುದಾನ ಸೇರಿದಂತೆ ಒಟ್ಟು ₹೫ ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸ ಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಶೋಷಿತ ವರ್ಗದ ಧ್ವನಿಯಾಗಿ ಸಮಾಜದ ಕಟ್ಟಕಡೆ ವ್ಯಕ್ತಿಗೂ ಶಿಕ್ಷಣ, ಸಮಾನತೆ ಮತ್ತು ಹಕ್ಕುಗಳು ದೊರೆಯಬೇಕೆಂದು ಹೋರಾಡಿದ ಮಹಾನ್ ನಾಯಕರು. ಅವರ ವಿಚಾರಧಾರೆಯನ್ನು ಯುವಪೀಳಿಗೆಗೆ ತಲುಪಿಸುವ ಕೆಲಸ ಇಂತಹ ಸಮುದಾಯ ಭವನಗಳ ಮೂಲಕ ಆಗಬೇಕು ಎಂದರು.ಇಂದಿರಾ ಗಾಂಧಿ ಹಾಗೂ ದೇವರಾಜ ಅರಸು ಅವರ ಅವಧಿಯಲ್ಲಿ ಭೂ ಸುಧಾರಣೆ ಕಾಯ್ದೆ ಮೂಲಕ ಉಳುವವನಿಗೆ ಭೂಮಿ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿತ್ತು. ಅದೇ ಆಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ರಾಮ ಠಾಣ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವವರಿಗೆ ''''''''ವಾಸಿಸುವವನೇ ಮನೆ ಒಡೆಯ'''''''' ಯೋಜನೆ ಯಡಿ ಹಕ್ಕುಪತ್ರ ನೀಡುತ್ತಿದೆ ಎಂದು ಹೇಳಿದರು.ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು ಹಾಗೂ ಸಾಮಾನ್ಯ ಜನರ ಬದುಕಿಗೆ ಆರ್ಥಿಕ ನೆರವು ನೀಡುತ್ತಿವೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸುಮಾರು ₹೪೩೦ ಕೋಟಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಿದೆ ಎಂದು ತಿಳಿಸಿದರು.ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಮಾತ ನಾಡಿ ಸುಮಾರು ೨೦ ವರ್ಷಗಳ ಹಿಂದೆ ಅಂಬೇಡ್ಕರ್ ಭವನಕ್ಕೆ ಅಡಿಪಾಯ ಹಾಕಲಾಗಿತ್ತು. ಇದೀಗ ಶಾಸಕ ಎಚ್.ಡಿ. ತಮ್ಮಯ್ಯ ಅವರ ಪ್ರಯತ್ನದಿಂದ ಭವನ ಉದ್ಘಾಟನೆಗೊಂಡಿರುವುದು ಸಂತಸದ ಸಂಗತಿ. ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಅನುದಾನ ತಂದು ಹಲವು ಕಾಮಗಾರಿ ಕೈಗೊಂಡಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲೇಶಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯೆ ಆಶಾ ವಸಂತ್ ಕುಮಾರ್, ಭವನ ಸಮಿತಿ ಅಧ್ಯಕ್ಷ ಉಮೇಶ್, ಜಯರಾಜ್ ಅರಸು, ಹಿರೇಮೂಳೆ ರಾಮಚಂದ್ರ, ಅಣ್ಣಯ್ಯ, ಸೋಮಶೇಖರ್, ಚಂದ್ರಶೇಖರ್ ಸೇರಿದಂತೆ ಗ್ರಾಮದ ಹಿರಿಯರು, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.