ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಕೆ.ಎಸ್.ಸುರೇಶ್

| Published : Dec 19 2024, 12:30 AM IST

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಕೆ.ಎಸ್.ಸುರೇಶ್
Share this Article
  • FB
  • TW
  • Linkdin
  • Email

ಸಾರಾಂಶ

Steps to Improve sslc Result: KS Suresh

-ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಟ್ರಸ್ಟ್‌ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಾ ಕಾರ್ಯಗಾರ

----

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮ ಪಡಿಸುವಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ೧೦ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳುತ್ತಿದ್ದು, ವಿದ್ಯಾರ್ಥಿ ಇದರ ಸದುಪಯೋಗ ಪೂರ್ಣ ಪ್ರಮಾಣದಲ್ಲಿ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ತಿಳಿಸಿದರು.

ಅವರು, ನಗರದ ಸ್ವಾಮಿವಿವೇಕಾನಂದ ಪ್ರೌಢಶಾಲೆಯಲ್ಲಿ ಕಲ್ಯಾಣಕರ್ನಾಟಕ ಪ್ರತಿಷ್ಠಾನ ಟ್ರಸ್ಟ್, ಅಕ್ಷರ ಜ್ಯೋತಿಯಾತ್ರೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಾಸನಾ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಬಸವಕುಮಾರ್‌ಪಾಟೀಲ್, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಕಾರ್ಯಗಾರ ತಮ್ಮ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದೆ. ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಆಯ್ದ ಶಾಲೆಗಳಲ್ಲಿ ಈ ಕಾರ್ಯಗಾರವನ್ನು ನಡೆಸಲಾಗುತ್ತಿದೆ. ವಿಶೇಷವಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎಲ್ಲಾ ವಿಷಯಕ್ಕೆ ಸಂಬಂಧಿಸಿದಂತೆ ಉತ್ತಮ ಬೋಧನೆಯನ್ನು ಸಹ ನುರಿತ ತಜ್ಞರಿಂದ ನೀಡಲಾಗುತ್ತದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲೂ ಸಹ ಮುಂದುವರೆಯಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಡಿ.ಆರ್.ಪ್ರವೀಳಾ ವಹಿಸಿದ್ದರು. ಶಿಕ್ಷಣ ಸಂಯೋಜಕ ಜೆ.ತಿಪ್ಪೇಸ್ವಾಮಿ, ಅಕ್ಷರ ದಾಸೋಹ ಅಧಿಕಾರಿ ಜಿ.ಮಂಜುನಾಥಸ್ವಾಮಿ ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

---

ಪೋಟೋ: ಚಳ್ಳಕೆರೆ ನಗರ ಸ್ವಾಮಿವಿವೇಕಾನಂದ ಪ್ರೌಢಶಾಲೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಾಸನ ಕಾರ್ಯಗಾರವನ್ನು ಬಿಇಒ ಕೆ.ಎಸ್.ಸುರೇಶ್ ಉದ್ಘಾಟಿಸಿದರು.

೧೮ಸಿಎಲ್‌ಕೆ೪