ಸಾರಾಂಶ
ಮಕ್ಕಳಿಗೆ ಶಿಕ್ಷಣ ಚಟುವಟಿಕೆ ಜತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯ. ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು.
ಪಾಂಡವಪುರ:
ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆಗೆ ಜಿಪಂ ಮಾಜಿ ಸದಸ್ಯೆ ನಾಗಮ್ಮಪುಟ್ಟರಾಜು ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು.ಸ್ಪರ್ಧೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆ ಆವರಣದಿಂದ ಚಿನಕುರಳಿ ಪ್ರಮುಖ ಬೀದಿಗಳಲ್ಲಿ ಸುಮಾರು 6 ಕಿಮೀವರೆಗೆ ಓಡುವ ಮೂಲಕ ಮ್ಯಾರಾಥಾನ್ ಅನ್ನು ವಿದ್ಯಾರ್ಥಿಗಳು ಯಶಸ್ವಿಗೊಳಿಸಿದರು.
ವಿದ್ಯಾರ್ಥಿಗಳ ಸುರಕ್ಷಿತಕ್ಕಾಗಿ ಅಲ್ಲಲ್ಲಿ ನೀರು, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ತಂಪು ಪಾನೀಯ ನೀಡಲಾಯಿತು. ನಂತರ ಮಾನ್ಸೂನ್ ಮ್ಯಾರಥಾನ್‌ನಲ್ಲಿ ವಿಜೇತರಾದ 24 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.ಜಿಪಂ ಮಾಜಿ ಸದಸ್ಯೆ ನಾಗಮ್ಮ ಪುಟ್ಟರಾಜು ಮಾತನಾಡಿ, ಮಕ್ಕಳಿಗೆ ಶಿಕ್ಷಣ ಚಟುವಟಿಕೆ ಜತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯ. ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಮಾಚಮ್ಮ, ಆಡಳಿತಾಧಿಕಾರಿ ನಿವೇದಿತಾ ನಾಗೇಶ್, ಉಪ ಪ್ರಾಂಶುಪಾಲ ಲಿಂಗರಾಜು, ಸಮನ್ವಯಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.ಮಾಜಿ ಶಾಸಕರಿಂದ ಸಹಾಯಧನ ವಿತರಣೆ
ಶ್ರೀರಂಗಪಟ್ಟಣ: ಇತ್ತೀಚೆಗೆ ಬೆಂಕಿ ಅವಘಡದಿಂದಾಗಿ ಸಂಪೂರ್ಣ ಮನೆ ಸುಟ್ಟು ಹೋಗಿ ಅಪಾರ ನಷ್ಟ ಉಂಟಾಗಿದ್ದ ಶ್ರೀರಂಗಪಟ್ಟಣ ತಾಲೂಕಿ ಹುಲಿಕೆರೆ ಗ್ರಾಮದ ಎಂಎನ್‌ಪಿಎಂ ಕಾಲೋನಿಯ ಶಿವಣ್ಣಚಾರಿ ಹಾಗೂ ಶಾಂತ ಅವರ ಮನೆಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕ ಧನ ಸಹಾಯ ಮಾಡಿದರು.ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಣೆಹಲಗೂರು: ಸಮೀಪದ ಹುಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಗಳು ಎಲ್.ಕೆ.ಜಿ ಮಕ್ಕಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ನಾಗೇಂದ್ರ, ಗ್ರಾಪಂ ಸದಸ್ಯ ಅರುಣ್ ಕುಮಾರ್, ಹಿರಿಯ ವಿದ್ಯಾರ್ಥಿಗಳಾದ ಶಿವರಾಜು, ಬಸವರಾಜು, ಮಂಜು ಶಿವಮಾದೇಗೌಡ, ಶಿಕ್ಷಕರಾದ ಕೆಂಡಗಣ್ಣಸ್ವಾಮಿ, ಹೇಮ, ಸುರಕ್ಷಾ ಇದ್ದರು.