ಸೋಮವಾರ ನಗರದಲ್ಲಿ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಜ್ಯದ ಹಿರಿಯ ಹಾಗೂ ಮಹಾನ್ ನಾಯಕರು. ಅವರ ಪುತ್ರ ಕುಮಾರಸ್ವಾಮಿ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶದಿಂದ ಪೊಲೀಸರನ್ನು ಬಳಸಿಕೊಳ್ಳುವುದು ಸರಿಯಾದ ಕ್ರಮವಲ್ಲ. ಸುಳ್ಳುಗಳನ್ನು ಮತ್ತೊಬ್ಬರ ಬಾಯಲ್ಲಿ ಹೇಳಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ ರಂದು ದೂರಿದರು.
ಕನ್ನಡಪ್ರಭ ವಾರ್ತೆ ಹಾಸನ
ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ. ರಾಜಕೀಯವಾಗಿ ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆರೋಪಿಸಿದರು.ಸೋಮವಾರ ನಗರದಲ್ಲಿ ಹಾಸನಾಂಬೆ ದೇವಿ ದರ್ಶನ ಪಡೆದ ನಂತರ ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಜ್ಯದ ಹಿರಿಯ ಹಾಗೂ ಮಹಾನ್ ನಾಯಕರು. ಅವರ ಪುತ್ರ ಕುಮಾರಸ್ವಾಮಿ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶದಿಂದ ಪೊಲೀಸರನ್ನು ಬಳಸಿಕೊಳ್ಳುವುದು ಸರಿಯಾದ ಕ್ರಮವಲ್ಲ. ಸುಳ್ಳುಗಳನ್ನು ಮತ್ತೊಬ್ಬರ ಬಾಯಲ್ಲಿ ಹೇಳಿಸಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ ರಂದು ದೂರಿದರು. ಹಾಸನಾಂಬೆ ಉತ್ಸವಕ್ಕೆ ಮೆಚ್ಚುಗೆಜಿಲ್ಲಾಡಳಿತ ಈ ಬಾರಿಯ ಜಾತ್ರೆಯನ್ನು ಅಚ್ಚುಕಟ್ಟಾಗಿ ಆಯೋಜಿಸಿದೆ. ವರ್ಷದಿಂದ ವರ್ಷಕ್ಕೆ ಹಾಸನಾಂಬೆ ಉತ್ಸವದ ಖ್ಯಾತಿ ಹೆಚ್ಚುತ್ತಿದ್ದು, ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿರುವುದು ಸಂತಸದ ವಿಚಾರ. ಭಕ್ತರ ನಂಬಿಕೆ ಮತ್ತು ಶ್ರದ್ಧೆ ಅಪಾರವಾಗಿದೆ ಎಂದರು. ಸಂಸದರು ಹಾಗೂ ಶಾಸಕರ ಮನವಿ ಮೇರೆಗೆ ಹಾಸನಾಂಬೆ ದರ್ಶನಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕೆ ಯಾರೂ ವೈಯಕ್ತಿಕವಾಗಿ ಕ್ರೆಡಿಟ್ ಪಡೆಯುವ ಅಗತ್ಯವಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಸಂಸದ ಶ್ರೇಯಸ್ಗೆ ಟಾಂಗ್ ನೀಡಿದರು.ಹಾಲಿನ ದರ ಏರಿಕೆಗೆ ವಿರೋಧವಿಲ್ಲ
ರಾಜ್ಯದಲ್ಲಿ ಹಾಲಿನ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದರ ಹೆಚ್ಚಳಕ್ಕೆ ತಮ್ಮ ವಿರೋಧವಿಲ್ಲ ಎಂದರು. ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಬರ ಪರಿಹಾರವಾಗಿ ₹ ೪,೫೦೦ ಕೋಟಿ ನೀಡಲಾಗಿದೆ. ಬಿಜೆಪಿ ಮುಖಂಡರಾದ ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪಕ್ಷಕ್ಕೆ ಮರಳುವ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇಬ್ಬರೂ ನಮ್ಮ ಪಕ್ಷದವರೇ ಎಂದರು.===