ಫುಟ್ ಪಾತ್ ನಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ

| Published : Feb 23 2025, 12:33 AM IST

ಸಾರಾಂಶ

ರಾಮನಗರ: ನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವಿಗೆ ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ಎಲ್ಲ ಮುಖ್ಯರಸ್ತೆಗಳಲ್ಲಿನ ಫುಟ್ ಪಾತ್ ಗಳು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಒತ್ತುವರಿ ತೆರವಿಗೆ ಗಡವು ನೀಡಿತ್ತು.

ರಾಮನಗರ: ನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವಿಗೆ ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ಎಲ್ಲ ಮುಖ್ಯರಸ್ತೆಗಳಲ್ಲಿನ ಫುಟ್ ಪಾತ್ ಗಳು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ನಗರಸಭೆ ಒತ್ತುವರಿ ತೆರವಿಗೆ ಗಡವು ನೀಡಿತ್ತು.

ಕೆಲ ಮುಖ್ಯರಸ್ತೆಗಳಲ್ಲಿನ ಫುಟ್ ಪಾತ್ ಗಳನ್ನು ಆಕ್ರಮಿಸಿಕೊಂಡಿದ್ದ ಒತ್ತುವರಿಯನ್ನು ಕೆಲ ವರ್ತಕರು ಮಾತ್ರ ಸ್ವಯಂ ಪ್ರೇರಿತರಾಗಿ ತೆರವುಗೊಳಿಸಿದ್ದರು. ಉಳಿದವರು ಒತ್ತುವರಿ ತೆರವು ಮಾಡಿಲ್ಲ. ಈಗ ಅವರಿಗೆಲ್ಲ ಬಿಸಿ ಮುಟ್ಟಿಸಲು ನಗರಸಭೆ ಮುಂದಾಗಿದೆ.

ಹಳೆಯ ಬೆಂಗಳೂರು - ಮೈಸೂರು ಹೆದ್ದಾರಿ ಬದಿಯಲ್ಲಿರುವ 8ನೇ ವಾರ್ಡಿನಲ್ಲಿರುವ ರಾಮಕೃಷ್ಣ ನರ್ಸಿಂಗ್ ಹೋಮ್ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ನಿಲ್ಲಿಸಿದ್ದ ಪಿಲ್ಲರ್ ಗಳನ್ನು ಜೆಸಿಬಿ ಯಂತ್ರದಿಂದ ಉರುಳಿಸಿದ್ದಾರೆ.

ರಸ್ತೆ ಮಧ್ಯ ಭಾಗದಂದ 150 ಅಡಿ ಜಾಗ ಬಿಟ್ಟು ಕಟ್ಟಡ ನಿರ್ಮಾಣ ಮಾಡಬೇಕು. ಇದನ್ನು ಉಲ್ಲಂಘಿಸಿ ಫುಟ್ ಪಾತ್ ನಲ್ಲಿ ನಿರ್ಮಾಣ ಮಾಡುತ್ತಿದ್ದ ಕಟ್ಟಡ ಕಾಮಗಾರಿಗೆ ನಗರಸಭೆ ಅಧಿಕಾರಿಗಳು ಅಡ್ಡಿ ಪಡಿಸಿದ್ದಾರೆ.

ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದು, ಅಂಗಡಿ ಮಾಲೀಕರು ಸ್ವಯಂ ಪ್ರೇರಿತವಾಗಿ ತೆರವು ಮಾಡಬೇಕು. ಒಂದು ವೇಳೆ ತೆರವು ಮಾಡದಿದ್ದಲ್ಲಿ ನಗರಸಭೆಯಿಂದ ಕಾರ್ಯಾಚರಣೆ ನಡೆಸಲಾಗುವುದು. ಒತ್ತುವರಿ ತೆರವಿಗೆ ವಿರೋಧ ವ್ಯಕ್ತಪಡಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

-----------------------------

21ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ರಾಮಕೃಷ್ಣ ನರ್ಸಿಂಗ್ ಹೋಮ್ ಪಕ್ಕದಲ್ಲಿ ಫುಟ್ ಪಾತ್ ನಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ಕಟ್ಟಡ ಕಾಮಗಾರಿಯನ್ನು ನಗರಸಭೆ ಅಧಿಕಾರಿಗಳು ಸ್ಥಗಿತಗೊಳಿಸಿದರು.

--------------------------------------------