ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ ನಿಲ್ಲಿಸಿ: ಪ್ರಭಾಕರ ಪೂಜಾರಿ

| Published : Oct 01 2025, 01:01 AM IST

ಸಾರಾಂಶ

ಒಕ್ಕೂಟ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಇರುವ ಎಲ್ಲ ಭಾಷೆಗಳನ್ನು ಒಕ್ಕೂಟ ಸರ್ಕಾರದ ಅಧಿಕೃತ ಆಡಳಿತ/ಸಂವಹನ ಭಾಷೆಗಳನ್ನಾಗಿ ಮಾಡಬೇಕು. ದೇಶದ ಎಲ್ಲ ನುಡಿಗಳೂ ಸಮಾನ ಎಂದು ಘೋಷಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ ಪೂಜಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಯುತ್ತಿದೆ. ದೇಶದಲ್ಲಿ ಈಗ ಇರುವುದು ಪ್ರಜಾಪ್ರಭುತ್ವ, ರಾಜಪ್ರಭುತ್ವ ಹೋಗಿ ಎಷ್ಟೋ ದಶಕಗಳಾಗಿವೆ. ಆದ್ದರಿಂದ ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ಸರ್ಕಾರ ರಾಜಭಾಷಾ ಸಮಿತಿ/ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ ಪೂಜಾರಿ ಹೇಳಿದ್ದಾರೆ.ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು.ಒಕ್ಕೂಟ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಇರುವ ಎಲ್ಲ ಭಾಷೆಗಳನ್ನು ಒಕ್ಕೂಟ ಸರ್ಕಾರದ ಅಧಿಕೃತ ಆಡಳಿತ/ಸಂವಹನ ಭಾಷೆಗಳನ್ನಾಗಿ ಮಾಡಬೇಕು. ದೇಶದ ಎಲ್ಲ ನುಡಿಗಳೂ ಸಮಾನ ಎಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.ಈ ಸಂದರ್ಭ ಸಂಘಟನೆ ಉಪಾಧ್ಯಕ್ಷ ಅನಿಲ್ ಪೂಜಾರಿ, ಸಾಬುದ್ದೀನ್, ನಗರ ಅಧ್ಯಕ್ಷ ಅಜರುದ್ದೀನ್, ಜಿಲ್ಲಾ ಸಂಚಾಲಕ ಕೃಷ್ಣಪಂಗಾಳ, ಸುಧಾಕರ್ ಕಲ್ಮಾಡಿ, ಕಾಪು ತಾಲೂಕು ಅಧ್ಯಕ್ಷ ವೀರೇಶ್ ಕಾರ್ಕಳ ತಾಲೂಕು ಅಧ್ಯಕ್ಷ ಇಮ್ರಾನ್ ಶೇಕ್, ಕುಂದಾಪುರ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಹಿಳಾ ಉಪಾಧ್ಯಕ್ಷೆ ಅಶ್ವಿನಿ ನಾಯಕ್, ಅನಿತಾ, ಪೂರ್ಣಿಮಾ ಮುಂತಾದವರು ಉಪಸ್ಥಿತರಿದ್ದರು.