ಪಡಿತರ ಬಂದ್ ಮಾಡಿ ಹೋರಾಟ ಸರ್ಕಾರಕ್ಕೆ ಎಚ್ಚರಿಕೆ
KannadaprabhaNewsNetwork | Published : Oct 20 2023, 01:00 AM IST
ಪಡಿತರ ಬಂದ್ ಮಾಡಿ ಹೋರಾಟ ಸರ್ಕಾರಕ್ಕೆ ಎಚ್ಚರಿಕೆ
ಸಾರಾಂಶ
ಧಾರವಾಡ: ನ್ಯಾಯಬೆಲೆ ಅಂಗಡಿ ಮೂಲಕ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿಕಾರರು ಧಾರವಾಡ ನಗರದ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಸರ್ಕಾರ ನೇರವಾಗಿ ಪಡಿತರ ಚೀಟಿದಾರರಿಗೆ ಹಣ ಬಿಡುಗಡೆ ಮಾಡುವುದು ಸರಿಯಲ್ಲ, ಇದರಿಂದ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಕಾರರಿಗೆ ಅನ್ಯಾಯವಾಗಲಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಡಿತರ ಅಂಗಡಿಕಾರರು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲವೇ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಪಡಿತರ ವಿತರಣೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಧಾರವಾಡ: ನ್ಯಾಯಬೆಲೆ ಅಂಗಡಿ ಮೂಲಕ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿಕಾರರು ಧಾರವಾಡ ನಗರದ ಆಹಾರ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. ಸರ್ಕಾರ ನೇರವಾಗಿ ಪಡಿತರ ಚೀಟಿದಾರರಿಗೆ ಹಣ ಬಿಡುಗಡೆ ಮಾಡುವುದು ಸರಿಯಲ್ಲ, ಇದರಿಂದ ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಕಾರರಿಗೆ ಅನ್ಯಾಯವಾಗಲಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪಡಿತರ ಅಂಗಡಿಕಾರರು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಇಲ್ಲವೇ ನವೆಂಬರ್ ತಿಂಗಳಲ್ಲಿ ರಾಜ್ಯಾದ್ಯಂತ ಪಡಿತರ ವಿತರಣೆ ಬಂದ್ ಮಾಡಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರವಿ ಪಾಟೀಲ, ಕಾರ್ಯಾಧ್ಯಕ್ಷ ಕೃಷ್ಣ ನಾಯಕ, ಸಂಘಟನಾ ಕಾರ್ಯದರ್ಶಿ ರಾಜು ಗೋದಿ, ನಾಗರಾಜ ಉಪರೆ, ಕಾರ್ಯದರ್ಶಿ ಮಲನಗೌಡ, ಅಫ್ತಾಬ್ ಬಂಕಾಪುರ ಇದ್ದರು.