ಕಬ್ಬೂರ ಸುತ್ತಮುತ್ತ ಬಿರುಗಾಳಿ, ಮಳೆ

| Published : Apr 18 2024, 02:26 AM IST

ಸಾರಾಂಶ

ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.

ಕಬ್ಬೂರ: ಕಬ್ಬೂರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ಗಾಳಿ, ಗುಡು‌ಗು ಮಿಂಚು ಸಹಿತ ಮಳೆಯಾಗಿದ್ದು, ಗಾಳಿಯ ರಭಸಕ್ಕೆ ಹಲವು ಮನೆಗಳಿಗೆ ಹಾನಿಯಾಗಿದೆ.ಗಾಳಿ, ಗುಡುಗು ಸಿಡಿಲಿಗೆ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿತು. ಗಾಳಿ ಜೋರಾಗಿ ಬೀಸಿದ್ದರಿಂದ ಕಬ್ಬೂರ ಪಟ್ಟಣದ ತೋಟದ ನಿವಾಸಿ ಸುರೇಖಾ ರಾಮಪ್ಪ ಗುರವ ಅವರ ಮನೆ ಸಂಪೂರ್ಣ ನಾಶವಾಗಿದೆ. ಜೊತೆಗೆ ಇನ್ನೂ ಹಲವು ತೋಟದ ಮನೆಗಳ ಹಂಚುಗಳು ಹಾರಿ ಹೋಗಿವೆ.