ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಮತ್ತೇ ಬೀದಿ ನಾಯಿಗಳು ದಾಳಿ ಮಾಡಿದ್ದು, ಪುಟ್ಟ ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿರುವ ಹೃದಯವಿದ್ರಾವಕ ಘಟನೆ ನಗರದ ರಾಜಕುಮಾರ ಲೇಔಟ್‌ನಲ್ಲಿ ಮಂಗಳವಾರ ಸಂಜೆ 6ರ ಸುಮಾರಿಗೆ ಜರುಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದಲ್ಲಿ ಮತ್ತೇ ಬೀದಿ ನಾಯಿಗಳು ದಾಳಿ ಮಾಡಿದ್ದು, ಪುಟ್ಟ ಬಾಲಕನನ್ನು ಕಚ್ಚಿ ಸುಮಾರು 100 ಅಡಿ ದೂರ ಎಳೆದೊಯ್ದಿರುವ ಹೃದಯವಿದ್ರಾವಕ ಘಟನೆ ನಗರದ ರಾಜಕುಮಾರ ಲೇಔಟ್‌ನಲ್ಲಿ ಮಂಗಳವಾರ ಸಂಜೆ 6ರ ಸುಮಾರಿಗೆ ಜರುಗಿದೆ.

ಇಲ್ಲಿನ ನಿವಾಸಿ ವಿರಾಜ ಸಂತೋಷ ಬಿರಾದಾರ (3) ಎಂಬ ಪುಟ್ಟ ಮಗು ಗಾಯಗೊಂಡಿದೆ. ಮನೆಮುಂದೆ ಆಟವಾಡುವಾಗ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ಮಾಡಿವೆ. ಈ ವೇಳೆ ಒಂದು ನಾಯಿ ಮಗುವನ್ನು ಎಳೆದುಕೊಂಡು ಓಡುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಓಡಿಹೋಗಿ ಬಾಲಕನನ್ನು ರಕ್ಷಿಸಿದ್ದಾರೆ. ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿರುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನ ಬೆನ್ನಿಗೆ ಹಾಗೂ ತೊಡೆಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೀದಿ ನಾಯಿಗಳ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಬೀದಿ ನಾಯಿಗಳ ಮೇಲೆ ಕ್ರಮ ಕೈಗೊಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.