ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿಯ ಬೀದಿ ಬದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಿರುವುದರ ವಿರುದ್ಧ ಶನಿವಾರವೂ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.ಕಬ್ಬು, ಎಳ್ಳು, ಬೆಲ್ಲ, ಹೂವು, ಸೊಪ್ಪು, ತರಕಾರಿ, ಬಟ್ಟೆ ಮಾರಾಟಕ್ಕೆ ಬಿಬಿಎಂಪಿ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ನೂರಾರು ವ್ಯಾಪಾರಿಗಳು ಹಬ್ಬದ ವಸ್ತುಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಹಬ್ಬದ ವ್ಯಾಪಾರಕ್ಕೆ ಅಡ್ಡಿಪಡಿಸಿ ನಮ್ಮ ಹೊಟ್ಟೆ ಮೇಲೆ ಹೊಡೆಯಬೇಡಿ ಎಂದು ವ್ಯಾಪಾರಿಗಳು ಮನವಿ ಮಾಡಿದರು.
ಪಾದಚಾರಿ ಮಾರ್ಗ ಒತ್ತುವರಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ಪಡೆದಿದ್ದೇವೆ. ಸರ್ಕಾರದಿಂದ ಸಾಲ ಪಡೆದಿದ್ದೇವೆ. ನಿಗದಿತ ಸ್ಥಳದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಹಬ್ಬಕ್ಕೆಂದು ಬಂಡವಾಳ ಹೂಡಿ ಹೆಚ್ಚು ವಸ್ತುಗಳನ್ನು ತಂದಿದ್ದೇವೆ. ಬಿಬಿಎಂಪಿಯ ದಿಢೀರ್ ಕ್ರಮದಿಂದ ವ್ಯಾಪಾರ ಮಾಡಲು ಆಗುತ್ತಿಲ್ಲ. ಇದರಿಂದ ನಮಗೆ ನಷ್ಟವಾಗುತ್ತದೆ. ಕನಿಷ್ಠ ಮೂರು ದಿನ ಅವಕಾಶ ಕೊಡಿ ಎಂದು ವ್ಯಾಪಾರಿಗಳು ಕೋರಿದರು.ಹೈಕೋರ್ಟ್ ಆದೇಶದಂತೆ ವ್ಯಾಪಾರಿಗಳ ತೆರವು: ಡಿಕೆಶಿಕನ್ನಡಪ್ರಭ ವಾರ್ತೆ ಬೆಂಗಳೂರುನಗರದಲ್ಲಿ ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಸುಗಮ ಸಂಚಾರ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಹೈಕೋರ್ಟ್ ಆದೇಶದ ಮೇರೆಗೆ ಪಾದಚಾರಿ ಮಾರ್ಗಗಳ ವ್ಯಾಪಾರಿಗಳ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಸಂಚಾರಕ್ಕೆ ಸಮಸ್ಯೆ ಆಗದಂತೆ ಬೀದಿ ಬದಿ ವ್ಯಾಪಾರಿಗಳು ಒಂದು ಬದಿಗೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಿದ್ಧವಿದ್ದೇವೆ. ಅವರಿಗೆ ಹಣಕಾಸು ಸಹಾಯವನ್ನೂ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ಜಯನಗರದಲ್ಲಿ ಬೀದಿ ವ್ಯಾಪಾರಿಗಳ ತೆರವು ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಾದಚಾರಿಗಳು ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ವ್ಯಾಪಾರ ಮಾಡಿದರೆ ಅನುಕೂಲ ಮಾಡಬಹುದು. ಆದರೆ ಪಾದಚಾರಿ ಮಾರ್ಗದಲ್ಲೇ ಶಾಶ್ವತ ಟೆಂಟ್ ಹಾಕಿಕೊಂಡರೆ ಪಾದಚಾರಿಗಳು ಎಲ್ಲಿ ಓಡಾಡಬೇಕು ಎಂದು ಪ್ರಶ್ನಿಸಿದರು.- - -ಜನರಿಗೆ ಸಮಸ್ಯೆ ಆಗದ ಹಾಗೆ ವ್ಯಾಪಾರ ಮಾಡಿದರೆ ನೆರವುಬೀದಿ ಬದಿ ವ್ಯಾಪಾರಿಗಳು ಮುಖ್ಯ ರಸ್ತೆಗಳ ಪಾದಚಾರಿ ಮಾರ್ಗದಲ್ಲೇ ವ್ಯಾಪಾರ ಮಾಡುತ್ತಾರೆ. ಅಡ್ಡ ರಸ್ತೆಗಳಲ್ಲಿನ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ಮಾಡಲು ಮನೆಗಳ ಮಾಲೀಕರು ಅವಕಾಶ ನೀಡುವುದಿಲ್ಲ. ಜನರಿಗೆ ಸಮಸ್ಯೆಯಾಗದ ಕಡೆ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುವುದಾದರೆ ಆರ್ಥಿಕ ಸಹಾಯ ಮಾಡಬಹುದು ಎಂದರು.