ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ ಜನರಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.ಅವರು ಭಾರತೀಯ ಜನತಾ ಪಾರ್ಟಿ ಶಿರಾ ಗ್ರಾಮಾಂತರ ಮಂಡಲದ ವತಿಯಿಂದ ತಾಲೂಕಿನ ಬರಗೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಬಿಜೆಪಿ ಪಕ್ಷಕ್ಕೆ ಪ್ರತಿ ವರ್ಷವೂ ಸಹ ಆನ್ ಲೈನ್ ಮೂಲಕ ಸದಸ್ಯತ್ವ ನೋಂದಾವಣೆ, ಚಾಲ್ತಿಯಲ್ಲಿ ಇರುತ್ತದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸದಸತ್ವ ನೋಂದಾವಣೆ ಮಾಡುವ ಮೂಲಕ ಪಕ್ಷಕ್ಕೆ ಬಲ ನೀಡುವ ಕೆಲಸ ಮಾಡಬೇಕಿದೆ. ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಎಂಎಲ್‌ಎ ಚುನಾವಣೆಗಳಿಗೆ ನಮ್ಮ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯತ್ವಗಳನ್ನು ಪ್ರತಿ ಗ್ರಾಮದಲ್ಲೂ ಅಭಿಯಾನ ನಡೆಸಿ ನೋಂದಾವಣೆ ಮಾಡಿಸುವ ಬಗ್ಗೆ ಹೆಚ್ಚು ಶ್ರಮ ಹಾಕಬೇಕಿದೆ ಎಂದರು.ಮಧುಗಿರಿ ವಲಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೆ ಗೌಡ ಮಾತನಾಡಿ ಬಿಜೆಪಿ ಸರಕಾರದ ಅವಧಿಯಲ್ಲಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸಿ ಈ ಭಾಗದ ರೈತರಿಗೆ ಅನುಕೂಲ ಮಾಡಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದ್ದು. ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲಿದೆ ಎಂದರು.ಈ ಸಂದರ್ಭದಲ್ಲಿ ನಿವೃತ್ತ ಕಂದಾಯ ಅಧಿಕಾರಿಗಳಾದ ನಾಗರಾಜ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ಚಿಕ್ಕಣ್ಣ, ಮುಖಂಡರಾದ ಮುಖಂಡ ಬಿ.ಎಸ್ ಸಿದ್ದೇಶ್, ಹಿರಿಯ ಮುಖಂಡರಾದ ಬರಗೂರು ಶಿವಕುಮಾರ್, ಮದ್ದೇವಳ್ಳಿ ರಾಮಕೃಷ್ಣಪ್ಪ, ಬರಗೂರು ಯುವರಾಜ್, ಕಾಟನಹಳ್ಳಿ ಭಾಸ್ಕರ್, ಗ್ರಾಮ ಪಂಚಾಯ್ತಿ ಸದಸ್ಯರಾದ ರಾಜು, ಮಾಜಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಈರಣ್ಣ ಪಟೇಲ್, ಮುಖಂಡರಾದ ನಟರಾಜು ಸಂತೆಪೇಟೆ, ನಾದೂರು ಕುಮಾರ್, ದೊಡ್ಡಬಾಣಗೆರೆ ಶ್ರೀಧರ್ ಸೇರಿದಂತೆ ಹಲವರು ಹಾಜರಿದ್ದರು.