ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಡಾ.ತುಂಗಳ

| Published : Jul 23 2024, 12:38 AM IST

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿ: ಡಾ.ತುಂಗಳ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಜಮಖಂಡಿ ಪತ್ರಿಕಾ ವರದಿಗಳಲ್ಲಿ ವಸ್ತುನಿಷ್ಠತೆಯನ್ನು ಕಾಪಾಡಬೇಕು. ಪತ್ರಿಕಾರಂಗದ ಪಾವಿತ್ರ‍್ಯತೆಯನ್ನು ಕಾಪಾಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪತ್ರಕರ್ತರು ಗಟ್ಟಿಗೊಳಿಸಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಸಲಹೆ ನೀಡಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಪತ್ರಿಕಾ ವರದಿಗಳಲ್ಲಿ ವಸ್ತುನಿಷ್ಠತೆಯನ್ನು ಕಾಪಾಡಬೇಕು. ಪತ್ರಿಕಾರಂಗದ ಪಾವಿತ್ರ‍್ಯತೆಯನ್ನು ಕಾಪಾಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪತ್ರಕರ್ತರು ಗಟ್ಟಿಗೊಳಿಸಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಸಲಹೆ ನೀಡಿದರು.ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಅಪ್ಪು ಪೋತರಾಜ ಅಧ್ಯಕ್ಷತೆ ವಹಿಸಿ‌ ಮಾತನಾಡಿರು. ಮುದ್ರಣ ಮಾಧ್ಯಮಕ್ಕೆ ಸಾವಿಲ್ಲ, ಸಾಮಾಜಿಕ ಜಾಲತಾಣ ವೇಗವಾಗಿ ಬೆಳೆದಷ್ಟು ಕುಟುಂಬದಲ್ಲಿಯೇ ಸಂಬಂಧಗಳು ಕೆಟ್ಟು ಹೋಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಜು.1 ರಿಂದ ಪ್ರಾರಂಭವಾದ ಮಂಗಳೂರು ಸಮಾಚಾರ ಪತ್ರಿಕೆಯು ನಾವು ಇಂದು ಜುಲೈ ತಿಂಗಳವಿಡಿ ಪತ್ರಿಕಾ ದಿನಾಚರಣೆ ಆಚರಣೆ ಮಾಡುತ್ತಿದ್ದೇವೆ. ಈ ಪತ್ರಿಕೆಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿವೆ. ಇಂತಹ ಮಹತ್ವದ ಕಾರ್ಯಗಳಲ್ಲಿ ಪತ್ರಕರ್ತರು ನಿರಂತರವಾಗಿ ಸಾಮಾಜಿಕ ಸೇವೆ ಮಾಡಬೇಕು. ಹಲವಾರು ಕತ್ರಕರ್ತರ ಜೀವನ ಇಂದಿಗೂ ಅತಂತ್ರ ಸ್ಥಿತಿಯಲ್ಲಿದೆ, ಪತ್ರಕರ್ತರು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ತಮ್ಮ ಜೀವನವನ್ನು ಪಣಕ್ಕಿಟ್ಟು ಸುದ್ದಿ ಮಾಡಬೇಕು. ಅಂತಹ ಸಂದರ್ಭಗಳಲ್ಲೂ ಪತ್ರಕರ್ತರಿಗೆ ಯಾವುದೇ ಭದ್ರತೆ ಇಲ್ಲದಿರುವುದು, ಸರ್ಕಾರ ಪತ್ರಕರ್ತರಿಗೆ ಸೂಕ್ತವಾದ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ, ಸುದ್ದಿ ಮಾಡಲು ಹೋದಾಗ ಪತ್ರಕರ್ತರಿಗೆ ಯಾವುದೇ ರಕ್ಷಣೆ ಇಲ್ಲದಿರುವುದು ಸಾಕಷ್ಟು ಪತ್ರಕರ್ತರ ಮೇಲೆ ಹಲ್ಲೆಯಾಗಿರುವ ಘಟನೆಗಳು ನಡೆದಿವೆ. ಅಲ್ಲದೇ, ಕೊಲೆಗಳಾಗಿವೆ ಇದರಿಂದ ಅವರ ಕುಟುಂಬ ಬೀದಿಗೆ ಬೀಳುತ್ತೆ, ಸಮಾಜವೇ ಮುಖ್ಯ ಎಂದು ಹಗಲು ರಾತ್ರಿ ಕೆಲಸ ಮಾಡಿ ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಾರೆ. ಪತ್ರಕರ್ತರ ನಿಗಮ ಸ್ಥಾಪಿಸಿ ನಮಗೆ ಆರ್ಥಿಕವಾಗಿ ಮೇಲೆ ತರಲು ಸರ್ಕಾರ ಯೋಜನೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಸದಾಶಿವ ಮಕ್ಕೋಜಿ, ಕಾನಿಪ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ಧಲಬಂಜನ ಮಾತನಾಡಿದರು. ಟಿ.ಪಿ. ಗಿರಡ್ಡಿ, ದಿ. ಬಾಬುರೆಡ್ಡಿ ತುಂಗಳ ಪ್ರಶಸ್ತಿ ಸ್ವೀಕರಿಸಿದರು. ಪತ್ರಕರ್ತರ ಪ್ರತಿಭಾವಂತ ಮಕ್ಕಳಾದ ಫಲ್ಗುಣ ಪಾಟೀಲ, ಗುರುಪ್ರಸಾದ ಮಠ, ಸ್ನೇಹಾ ಅರಕೇರಿ, ಅನುಶ್ರೀ ಪೋತರಾಜ, ಸಿದ್ಧಾರ್ಥ ಅರಕೇರಿ ಅವರನ್ನು ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಪತ್ರಿಕಾ ವಿತರಕರಾದ ರಘುನಾಥ ಝಾಂಬರೆ, ಅಕ್ಷಯ ಕೋಲೂರ, ಹಾಗೂ ಹೋರಾಟಗಾರ ನಾಗೇಶ ಜತ್ತಿಯನ್ನು ನ್ಮಾನಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್.ಗಲಗಲಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಹೇಶ ಸಂಖ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಂತೋಷ ಬಾಡಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಗುರುರಾಜ ಹಿಡಕಲ್ ಪ್ರಾರ್ಥನೆ ಗೀತೆ ಹಾಡಿದರು. ಶಿವಾನಂದ ಕೊಣ್ಣೂರ ಸ್ವಾಗತಿಸಿದರು. ಮಲ್ಲಿಕಾರ್ಜುನ ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ರಫೀಕ ಮಾರಕಪನಳ್ಳಿ ಭಿನ್ನವತ್ತಳೆ ಓದಿದರು. ಸಾನ್ವಿ ಅರಕೇರಿ ಭಕ್ತಿಗೀತೆ ಹಾಡಿದರು. ಮುಖ್ಯ ಶಿಕ್ಷಕ ಶಂಕರ ಲಮಾಣಿ ನಿರೂಪಿಸಿದರು. ಆರ್.ಎಸ್. ಹೊನಗೌಡ ವಂದಿಸಿದರು.

------------------------------------------

ಕೋಟ್‌

ಸುದ್ದಿ ಮಾಡಲು ಹೋದಾಗ ಪತ್ರಕರ್ತರಿಗೆ ರಕ್ಷಣೆ ಇಲ್ಲದ್ದರಿಂದ ಪತ್ರಕರ್ತರ ಮೇಲೆ ಹಲ್ಲೆಗಳಾಗುತ್ತಿವೆ. ಅಲ್ಲದೇ, ಕೊಲೆಗಳಾಗಿವೆ ಇದರಿಂದ ಅವರ ಕುಟುಂಬ ಬೀದಿಗೆ ಬೀಳುತ್ತೆ, ಸಮಾಜವೇ ಮುಖ್ಯ ಎಂದು ಹಗಲು ರಾತ್ರಿ ಕೆಲಸ ಮಾಡಿ ಸಮಾಜ ತಿದ್ದುವ ಕೆಲಸ ಮಾಡುತ್ತಾರೆ. ಪತ್ರಕರ್ತರ ನಿಗಮ ಸ್ಥಾಪಿಸಿ ಸರ್ಕಾರ ನಮಗೆ ಆರ್ಥಿಕವಾಗಿ ಸಬಲರಾಗಲು ಯೋಜನೆ ರೂಪಿಸಬೇಕು.

- ಅಪ್ಪು ಪೋತರಾಜ, ಕಾನಿಪ ತಾಲೂಕು ಅಧ್ಯಕ್ಷ