ಸಾರಾಂಶ
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಮತದಾನ ಪ್ರಮಾಣ ಹೆಚ್ಚಳ ಮತ್ತು ಕಡ್ಡಾಯ ನೋಂದಣಿ ಪ್ರಕ್ರಿಯೆ ಪ್ರಮುಖ ತಳಹದಿಯಾಗಿದ್ದು, ಈ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಅವಕಾಶವನ್ನು ಯುವ ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಹೇಳಿದರು.
ಕನ್ನಡಪ್ರಭ ವಾರ್ತೆ ಭಟ್ಕಳ
ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಮತದಾನ ಪ್ರಮಾಣ ಹೆಚ್ಚಳ ಮತ್ತು ಕಡ್ಡಾಯ ನೋಂದಣಿ ಪ್ರಕ್ರಿಯೆ ಪ್ರಮುಖ ತಳಹದಿಯಾಗಿದ್ದು, ಈ ಕುರಿತು ಭಾರತ ಚುನಾವಣಾ ಆಯೋಗ ನೀಡಿರುವ ಅವಕಾಶವನ್ನು ಯುವ ಮತದಾರರು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಹೇಳಿದರು.ಅವರು ಹಡೀನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯುವ ಮತದಾರರ ನೋಂದಣಿ ಅಭಿಯಾನದ ಮಾನವ ಸರಪಳಿಯಲ್ಲಿ ಭಾಗವಹಿಸಿ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಡಿ.31ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವ ಮತದಾರರ ನೋಂದಣಿ, ನಿಗದಿತ ದಿನಾಂಕದೊಳಗೆ ಹೆಸರು ತೆಗೆದುಹಾಕುವುದು, ವರ್ಗಾವಣೆ, ತಿದ್ದುಪಡಿಗೆ ಅವಕಾಶ ಇರುತ್ತದೆ.ಈ ಬಗ್ಗೆ ನಮೂನೆಗಳನ್ನು ಭರ್ತಿ ಮಾಡುವ ಕುರಿತು ಯುವ ಸಮೂಹ ತಿಳಿವಳಿಕೆ ಪಡೆದು ತಾವು ಮತ್ತು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿರುವವರಿಗೆ ಮಾಹಿತಿ ನೀಡಿ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಮೂಲಕ ನವ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಲು ಕರೆ ನೀಡಿದರು.
ಪ್ರಭಾರ ಪ್ರಾಚಾರ್ಯ ಎಂ.ಕೆ. ನಾಯ್ಕ, ತಾಪಂ ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಪಂಚಾಯತ ಅಭಿವೃದ್ಧಿ ಅಧಿಕಾರಿ ಯಾದವ ನಾಯ್ಕ, ತಾಪಂ ಕಚೇರಿಯ ಕರಿಯಪ್ಪ ನಾಯ್ಕ ಹಾಗೂ ಕಾಲೇಜಿನ ಉಪನ್ಯಾಸಕ ರಾಜೇಶ ನಾಯ್ಕ ಮುಂತಾದವರಿದ್ದರು.