ಒಗ್ಗಟ್ಟಿನಿಂದ ಪಕ್ಷ ಬಲಪಡಿಸಿ: ಟಿ.ಪಿ.ರಮೇಶ್

| Published : Sep 18 2025, 01:10 AM IST

ಒಗ್ಗಟ್ಟಿನಿಂದ ಪಕ್ಷ ಬಲಪಡಿಸಿ: ಟಿ.ಪಿ.ರಮೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಒಗ್ಗಟ್ಟಿನಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ತಂದು ಕೊಡಲು ಶ್ರಮಿಸಬೇಕು ಎಂದು ಟಿ.ಪಿ. ರಮೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಒಗ್ಗಟ್ಟಿನಿಂದ ಪಕ್ಷ ಬಲಪಡಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆ ಬಹುಮತ ತಂದು ಕೊಡಲು ಶ್ರಮಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಕರೆ ನೀಡಿದ್ದಾರೆ. ಚೆಂಬು ಗ್ರಾಮದ ಆನ್ಯಾಳದಲ್ಲಿ ನಡೆದ ಚೆಂಬು ವಲಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಜನ ಬೆಂಬಲವನ್ನು ಹೆಚ್ಚಿಸಿಕೊಳ್ಳಬೇಕು. ವಿವಿಧ ಪ್ರದೇಶಗಳಲ್ಲಿ ಆಗಬೇಕಾಗಿರುವ ಕಾಮಗಾರಿಗಳು ಮತ್ತು ಕಾರ್ಯಕರ್ತರ ಅಹವಾಲುಗಳನ್ನು ಶಾಸಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರುವುದಾಗಿ ತಿಳಿಸಿದರು.ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ವಾಸು ರೈ, ಶ್ರೀಧರ್, ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರಾದ ಗಿರೀಶ್ ಹೊಸೂರು, ಕುಸುಮ ಯೋಗೀಶ್ವರ್, ಶಶಿಕಲ ಕಟ್ಟಪ್ಪಾರೆ, ಬೂತ್ ಅಧ್ಯಕ್ಷರಾದ ಪಕೀರ ಮಂಗಳಪಾರೆ, ಚೆನ್ನಪ್ಪ ನಡುಬೆಟ್ಟು, ರಘುನಾಥ್ ಬಾಲಂಬಿ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಮಂಗಳಪಾರೆ, ಸಮಿತಿ ಸದಸ್ಯರಾದ ನವೀನ್ ರಾಮಕಜೆ, ಜಯಪ್ರಕಾಶ್ ಪನ್ನೇಡ್ಕರ್ ಕೊಪ್ಪದ, ಸುಧಾಕರ ಕೊಪ್ಪದ, ಭುವನೇಶ್ವರ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಇದೇ ಸಂದರ್ಭ ಕಾರ್ಯಕರ್ತರು ತಮ್ಮ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಿದರು.