ಸಾರಾಂಶ
ಶಿವಮೊಗ್ಗ: ಟ್ರೇಡ್ ಲೈಸನ್ಸ್ ಮೇಳ ಅತ್ಯಂತ ಯಶಸ್ವಿಯಾಗಿದ್ದು, ಸೂಕ್ತ ದಾಖಲೆಗಳೊಂದಿಗೆ ನೂರಾರು ವರ್ತಕರು ವ್ಯಾಪಾರ ನಡೆಸಲು ಅವಶ್ಯವಿರುವ ಲೈಸೆನ್ಸ್ ಪಡೆದುಕೊಂಡರು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.ಇಲ್ಲಿನ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಆಯೋಜಿಸಿದ್ದ ಲೈಸೆನ್ಸ್ ಮೇಳದಲ್ಲಿ ವರ್ತಕರಿಗೆ ಪರವಾನಗಿ ಪತ್ರ ವಿತರಿಸಿ ಮಾತನಾಡಿ, ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ವರ್ತಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಮೇಳ ನಡೆಸಲು ಸಹಕಾರ ನೀಡಿದ್ದು ಅಭಿನಂದನೀಯ ಎಂದರು.
ಟ್ರೇಡ್ ಲೈಸೆನ್ಸ್ ಮಹಾನಗರ ಪಾಲಿಕೆಗೆ ಒಂದು ಪ್ರಮುಖ ಆದಾಯದ ಮೂಲವಾಗಿದೆ. ಶಿವಮೊಗ್ಗದ ನಾಗರಿಕರಾಗಿ ಮಹಾನಗರ ಪಾಲಿಕೆಯನ್ನು ಆರ್ಥಿಕವಾಗಿ ಸದೃಢಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.ವಾಣಿಜ್ಯ ಮತ್ತು ಕೈಗಾರಿಕೋದ್ಯಮಗಳಿಗೆ ಕಾನೂನು ಬದ್ಧ ವ್ಯವಹಾರ ಮಾಡಲು ಟ್ರೇಡ್ ಲೈಸೆನ್ಸ್ ಕಡ್ಡಾಯವಾಗಿದೆ. ವ್ಯವಹಾರದ ವಿಶ್ವಾಸಾರ್ಹತೆ ಹೆಚ್ಚಿಸುತ್ತದೆ. ಸರ್ಕಾರಿ ಯೋಜನೆಗಳಿಗೆ ಟೆಂಡರ್ ಹಾಕಲು ಅನುಕೂಲವಾಗುತ್ತದೆ. ಶಿವಮೊಗ್ಗದಲ್ಲಿ ಹೆಚ್ಚಿನ ಸಂಖ್ಯೆಯ ವರ್ತಕರು ಅಭಿಯಾನದ ಪ್ರಯೋಜನ ಪಡೆದಿದ್ದಾರೆ. ಮುಂದೆ ಇನ್ನು ಈ ರೀತಿಯ ಅನೇಕ ಕಾರ್ಯಕ್ರಮಗಳನ್ನು ಸಂಘದಿಂದ ನಡೆಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಇ ಖಾತೆ ಸಮಸ್ಯೆ ಇದ್ದು, ಈಗ ಸರಳವಾಗಿದೆ. ಇನ್ನೂ ಸಣ್ಣಪುಟ್ಟ ತೊಂದರೆಗಳಿವೆ. ಶಿವಮೊಗ್ಗ ನಗರದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಹಾಗೂ ಜನತೆಗೆ ಸಾಕಷ್ಟು ಉದ್ಯೋಗವನ್ನು ಒದಗಿಸಿರುವ ಶಿವಮೊಗ್ಗ ನಗರದ ಸಾಗರ ರಸ್ತೆ, ಆಟೋ ಕಾಂಪ್ಲೆಕ್ಸ್ ಹಾಗೂ ಕಲ್ಲೂರು - ಮಂಡ್ಲಿ ಕೈಗಾರಿಕಾ ಪ್ರದೇಶಗಳ ನಿರ್ವಹಣೆ ಮತ್ತು ಸ್ವಚ್ಛತೆಯನ್ನು ನಿಯಮಿತವಾಗಿ ನಿರ್ವಹಿಸಬೇಕು. ನಗರದ ಅಭಿವೃದ್ಧಿಗೆ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಸದಾ ಸಿದ್ಧವಾಗಿದೆ ಎಂದು ಭರವಸೆ ನೀಡಿದರು.ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ವಿತರಕ ಸಂಘದ ಅಧ್ಯಕ್ಷ ದೇವರಾಜ್, ಖಜಾಂಚಿ ಚಂದ್ರಶೇಖರ್, ಮಹಾನಗರ ಪಾಲಿಕೆಯ ಪ್ರಭುರಾಜ್, ಪುಷ್ಪವತಿ, ವಿಕಾಸ್, ವಸಂತ್, ನವೀನ್ ಸೇರಿದಂತೆ ಇನ್ನೂ ಅನೇಕ ಸಿಬ್ಬಂದಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳು, ವರ್ತಕರು ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))