ಚನ್ನಪಟ್ಟಣ: ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದ್ದು, ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬರು ಜವಾಬ್ದಾರಿ ಅರಿತುಕೊಳ್ಳಬೇಕು ಎಂದು ತಹಸೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.
ಚನ್ನಪಟ್ಟಣ: ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದ್ದು, ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬರು ಜವಾಬ್ದಾರಿ ಅರಿತುಕೊಳ್ಳಬೇಕು ಎಂದು ತಹಸೀಲ್ದಾರ್ ಬಿ.ಎನ್.ಗಿರೀಶ್ ತಿಳಿಸಿದರು.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತು ಮತ್ತು ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.ಸಾತಂತ್ರ್ಯ ಬಂದ ನಂತರ ಹಲವಾರು ಸವಾಲುಗಳನ್ನು ಎದುರಿಸಿ ದೇಶ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ದೇಶದ ಭವಿಷ್ಯವಾದ ಯುವ ಮನಸ್ಸುಗಳನ್ನು ರೂಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಮ್ಮ ಸಂವಿಧಾನ ಕೇವಲ ದಾಖಲೆ ಅಲ್ಲ ದೇಶದ ಆತ್ಮವಾಗಿದೆ. ಅದು ಎಲ್ಲರಿಗೂ ನ್ಯಾಯ ಮತ್ತು ಸಮಾನತೆ ಒದಗಿಸಿದೆ ಎಂದರು.
ಇಂದು ನಮ್ಮ ದೇಶದ ಸಂವಿಧಾನ ಜಾರಿಗೆ ಬಂದು ದೇಶ ಪ್ರಜಾಸತ್ಮಾತ್ಮಕ ಗಣರಾಜ್ಯವಾದ ದಿನ. ಇಂದು ನಾವೆಲ್ಲ ದೇಶಕ್ಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ದೇಶದ ಸ್ವಾತಂತ್ರ್ಯಕ್ಕೆ ಓಡಾಡಿದ ಮಹನೀಯರನ್ನು ಸ್ಮರಿಸಬೇಕು. ಸಂವಿಧಾನ ನಮಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯ ನೀಡಿದೆ. ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಜನಸ್ನೇಹಿ ಆಡಳಿತ ನೀಡುವುದು ನಮ್ಮಮುಖ್ಯ ಗುರಿ ಎಂದರು.ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಎಸ್.ಪ್ರಕಾಶ್ ಮಾತನಾಡಿ, ಸಂವಿಧಾನದ ಜಾರಿಗೆ ಬಂದಲ್ಲಿಂದ ಇಲ್ಲಿಯವರೆಗೆ ಗಣರಾಜ್ಯ ದಿನ ಆಚರಿಸುತ್ತಿದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ವೇಳೆ ಸುಮಾರು ೫೮೦ ಸಂಸ್ಥಾನಗಳು ಆಳ್ವಿಕೆ ನಡೆಸುತ್ತಿದ್ದವು. ಅವೆಲ್ಲವನ್ನು ಒಗ್ಗೂಡಿ ದೇಶ ಕಟ್ಟಲಾಯಿತು. ಇಡೀ ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ. ನಮ್ಮ ಸಂವಿಧಾನ ಎಲ್ಲರಿಗೂ ಒಂದು ಮತ ಒಂದು ಮೌಲ್ಯ, ಸಮಾನತೆ ನೀಡಿದೆ. ಎಲ್ಲ ಧರ್ಮ ಎಲ್ಲ ವರ್ಗದ ಜನರಿಗೂ ರಕ್ಣಣೆ ನೀಡಿದೆ ಎಂದರು.
ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಹೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ಇಒ ಸಂದೀಪ್, ನಗರಸಭೆ ಪ್ರಭಾರ ಅಧ್ಯಕ್ಷ ಲೋಕೇಶ್, ಕಸಾಪ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಇತರರು ಸೇರಿದಂತೆ ಹಲವು ಉಪಸ್ಥಿತರಿದ್ದರು.
ಪೊಟೋ೨೬ಸಿಪಿಟಿ೧: ಚನ್ನಪಟ್ಟಣದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವವನ್ನು ತಹಸೀಲ್ದಾರ್ ಗಿರೀಶ್ ಹಾಗೂ ಇತರರು ಉದ್ಘಾಟಿಸಿದರು.