ಯೋಗಾಭ್ಯಾಸದಿಂದ ಒತ್ತಡ ನಿವಾರಣೆ: ಸಿಎ ಶಾಂತಾರಾಮ ಶೆಟ್ಟಿ

| Published : Jun 24 2024, 01:35 AM IST

ಯೋಗಾಭ್ಯಾಸದಿಂದ ಒತ್ತಡ ನಿವಾರಣೆ: ಸಿಎ ಶಾಂತಾರಾಮ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಪತ್ರಕರ್ತರಿಗೆ 10 ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಏರ್ಪಟ್ಟಿತು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಉದ್ಘಾಟಿಸಿದರು. ಪತ್ರಕರ್ತರಿಗೆ 10 ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಭಾಗವಹಿಸಿದ್ದರು.ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ, ಗಿರಿಧರ ಶೆಟ್ಟಿ, ಮಂಗಳೂರು ಸಿಟಿ ರೋಟರಾಕ್ಟ್ ಕ್ಲಬ್ ಕಾರ್ಯದರ್ಶಿ ವರುಣ್ ರೈ ಇದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ನಿರೂಪಿಸಿದರು.