ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

| Published : May 05 2025, 12:48 AM IST

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ-ಸಂಖ್ಯೆ ಸಮೇತ ಕೇಂದ್ರ ಸಚಿವ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿಲ್ಲ ಎಂದಿರುವ ಕೇಂದ್ರ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರಕರಣದಲ್ಲಿ ಕೆಲವರಿಗೆ ಕೊಲೆ ಬೆದರಿಕೆ ಇದೆ ಎನ್ನುವ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಕರಾವಳಿ ವಿಶೇಷ ಪಡೆ ರಚನೆಗೆ ಇನ್ನೂ ಸಮಯ ನಿರ್ಧಾರ ಮಾಡಿಲ್ಲ. ಅದಕ್ಕೆ ಅಧಿಕಾರ ವ್ಯಾಪ್ತಿ, ಸಂಖ್ಯಾಬಲ ಇರಬೇಕಾಗುತ್ತದೆ. ಅದನ್ನು ನೋಡಿಕೊಂಡು ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ನಿರ್ಧಾರ ಮಾಡುವುದಾಗಿ ತಿಳಿಸಿದರು.