ಸಾರಾಂಶ
ಕನ್ನಡಪ್ರಭ ವಾರ್ತೆ ಬೇಲೂರುಅರೇಹಳ್ಳಿಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿ ವೇಳೆ ಅನುಮಾನಾಸ್ಪದವಾಗಿ ಓಡಾಡುವ ದಾರಿಹೋಕರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.ಇತ್ತೀಚೆಗೆ ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ, ಅಂಗಡಿ, ಹಾಗೂ ಕಾಫಿ ತೋಟಗಳಲ್ಲಿ ಕಳವು ಪ್ರಕರಣ ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದೆ ಲಿಂಗಾಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿರುವ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಇದೀಗ ರಾತ್ರಿ ಸಮಯದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವವರ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಬಡ ಮಹಿಳೆಯೊಬ್ಬರ ಪೆಟ್ಟಿಗೆ ಅಂಗಡಿಗೆ ಕನ್ನ ಹಾಕಿ ಸಾವಿರಾರು ಮೌಲ್ಯದ ವಸ್ತುಗಳನ್ನು ದೋಚಿದ್ದರು. ಬಳಿಕ ಲಿಂಗಾಪುರ ಅಂಗನವಾಡಿಯನ್ನು ಬಿಡದ ಖದೀಮರು ಅಲ್ಲಿದ್ದ ಸಾವಿರಾರು ಮೌಲ್ಯದ ಟಿವಿ, ಗ್ಯಾಸ್ ಸಿಲಿಂಡರ್ ಸೇರಿದಂತೆ ಇನ್ನಿತರ ಮಕ್ಕಳ ಆಹಾರ ಪದಾರ್ಥಗಳನ್ನು ದೋಚಿದ್ದರು. ಇದೀಗ ಪೊಲೀಸರು ರಾತ್ರಿ ತಪಾಸಣೆಗೆ ನಡೆಸುತ್ತಿರುವ ದೃಶ್ಯ ಕಂಡುಬಂತು.
;Resize=(128,128))
;Resize=(128,128))
;Resize=(128,128))