ಸಾರಾಂಶ
ತಾಲೂಕು ಘಟಕದ ಕಾರ್ಯದರ್ಶಿ ಉಷಾ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೂಡುಬಿದಿರೆ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಗುರುವಾರ ತಾಲೂಕು ಕಛೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡರು. ಗ್ರಾಮ ಆಡಳಿತಾಧಿಕಾರಿಗಳ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು, ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. ನಂತರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಮ್, ತಿಲಕ್, ಬಾಲಚಂದ್ರ, ಕಂದಾಯ ನಿರೀಕ್ಷಕ ಮಂಜುನಾಥ್, ಉಪಸ್ಥಿತರಿದ್ದರು.
ತಾಲೂಕು ಘಟಕದ ಕಾರ್ಯದರ್ಶಿ ಉಷಾ ಮತ್ತು ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೆಂಗಳೂರು ಇದರ ನಿರ್ದೇಶನದಂತೆ ಮೂಡುಬಿದಿರೆ ಘಟಕದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.