ಬೇಡಿಕೆ ಈಡೇರಿಕೆಗಾಗಿ ಮುಷ್ಕರ 6ನೇ ದಿನಕ್ಕೆ

| Published : Feb 16 2025, 01:45 AM IST

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರ ಕೆಲಸಗಳು ಸ್ಥಗಿತಗೊಂಡಿರುವುದರಿಂದ ತೊಂದರೆಯಾಗಿದೆ. ಹೀಗಾಗಿ ಈ ಕೂಡಲೇ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು

ಪಾಂಡವಪುರ: ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲ ಹಾಗೂ ಸೇವಾ ಸೌಲಭ್ಯಗಳನ್ನು ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 6ನೇ ದಿನಕ್ಕೆ ಕಾಲಿರಿಸಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎನ್.ಕೆಂಪೇಗೌಡ ಹಾಗೂ ಪದಾಧಿಕಾರಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು.

ಎಸ್.ಎನ್.ಕೆಂಪೇಗೌಡ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಸಂಘವು ಕಳೆದ 6 ದಿನಗಳಿಂದ ಶಾಂತಿಯುತ ಧರಣಿ ಕೈಗೊಂಡಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರ ಕೆಲಸಗಳು ಸ್ಥಗಿತಗೊಂಡಿರುವುದರಿಂದ ತೊಂದರೆಯಾಗಿದೆ. ಹೀಗಾಗಿ ಈ ಕೂಡಲೇ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ರವಿ ಬೆಳಗೆರೆ, ಜಿಲ್ಲಾ ನಿರ್ದೇಶಕ ಬನ್ನಂಗಾಡಿ ದಿನೇಶ್, ತಾಲೂಕು ಉಪಾಧ್ಯಕ್ಷೆ ಜ್ಯೋತಿ (ಭೂಮಿ ಶಾಖೆ), ಕಾರ್ಯದರ್ಶಿ ಸಂಜೀವ್ ರಾಥೋಡ್. ಗೌರವಾಧ್ಯಕ್ಷ ನಂಜುಂಡಸ್ವಾಮಿ, ಸಿದ್ದೇಶ್, ಪ್ರಭಾಕರ್, ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ್, ಖಜಾಂಚಿ ಜಯರಾಂ, ಪದಾಧಿಕಾರಿಗಳಾದ ಎಂ.ಡಿ.ಕುಮಾರ್, ಲೋಕೇಶ್, ರೇವಣ್ಣ ಸೇರಿ ಇತರೆ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.