ಶೇ.100 ರಷ್ಟು ಮತದಾನ ಮಾಡಲು ಶ್ರಮಿಸಿ

| Published : Apr 01 2024, 12:47 AM IST

ಸಾರಾಂಶ

ಲೋಕಾಪುರ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.

ಕನ್ನಡಪ್ರಭ ವಾರ್ತೆ ಲೋಕಾಪುರ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರ ಮತದಾನದ ಮಾಡಲೇಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನ ಸಾಮಾನ್ಯರನ್ನು ಮತ ಚಲಾಯಿಸಲು ಪ್ರೇರೆಪಿಸಬೇಕು. ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ನೂರರಷ್ಟು ಮತದಾನವಾಗುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸುನೀಲ ಗಾವಡೆ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭಾನುವಾರ ಲೋಕಸಭಾ ಚುನಾವಣೆ-೨೦೨೪ರ ಸಾರ್ವಜನಿಕರಿಗೆ ಮತದಾನ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಚುನಾವಣೆ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಪಟ್ಟಣ ಪಂಚಾಯತ ಸಿಬ್ಬಂದಿ ಮತದಾರರದಲ್ಲಿ ಜಾಗೃತಿ ಮೂಡಿಸಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡುವಂತೆ ಕೋರಿದರು.

ಪಟ್ಟಣ ಪಂಚಾಯತ ಆರೋಗ್ಯ ನಿರೀಕ್ಷಕ ಭಾಗ್ಯಾಶ್ರೀ ಪಾಟೀಲ ಮಾತನಾಡಿ, ಮತದಾರರು ಮತಟ್ಟೆಗೆ ಆಗಮಿಸಿ ಮತದಾನ ಮಾಡುವಂತೆ ಮನವೋಲಿಸಬೇಕು ಎಂದು ಹೇಳಿದರು.

ಈ ವೇಳೆ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪಟ್ಟಣದ ವಿವಿಧ ಬಡಾವಣೆಯಲ್ಲಿ ಮತದಾನದ ಜಾಗೃತಿ ಜಾಥಾ ಮುಖಾಂತರ ಚುನಾವಣೆಗೆ ಸಂಬಂಧಿಸಿದ ಹಾಡುಗಳನ್ನು, ಸ್ಲೋಗನ್‌ಗಳ ಮೂಲಕ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಿ ಅಂತಾ ಮನವಿ ಮಾಡಿದರು.

ಈ ವೇಳೆ ಪಟ್ಟಣ ಸಿಬ್ಬಂದಿ ಗ್ಯಾನು ರೊಡ್ಡಪ್ಪನವರ, ಕಿರಣ ಗಡ್ಡಿ, ಪೌರಕಾರ್ಮಿಕರಾದ ಮಲ್ಲಪ್ಪ ರೊಡ್ಡಪ್ಪನವರ, ಲಕ್ಷ್ಮಣ ಜುನ್ನಪ್ಪನವರ, ಮಾದೇವಿ ಸಗರಮ್ಮನವರ, ದುರ್ಗವ್ವ ಮಾದರ, ಯಲ್ಲವ್ವ ಜುನ್ನಪ್ಪನವರ, ಶಶಿಕಲಾ ಹುಗ್ಗಿ ಇತರರು ಇದ್ದರು.

ಕೋಟ್...

ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ ಪ್ರತಿಯೊಬ್ಬರು ಬರುವ ಮೇ 7 ರಂದು ತಪ್ಪದೇ ಮತದಾನ ಮಾಡಬೇಕು. ಮತದಾನ ಪ್ರಮಾಣ ಶೇ.100 ರಷ್ಟು ಹೆಚ್ಚಿಸಲು ಸೂಕ್ತ ಕ್ರಮ ವಹಿಸಬೇಕು.

ಸುನೀಲ ಗಾವಡೆ. ಪಟ್ಟಣ ಪಂಚಾಯತ ಮುಖ್ಯಾಧಿಕಾರಿ